ಪಿಎಸಿಎಸ್ ನೂತನ ಅಧ್ಯಕ್ಷ ವೆಂಕಟೇಶ್ ಕಾಂಗ್ರೆಸ್‌ಗೆ

19bhr 2
Published on

ಬಾಳೆಹೊನ್ನೂರು: ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕಾಂಗ್ರೆಸ್ ಬೆಂಬಲ ಪಡೆದು ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕೆ.ಕೆ.ವೆಂಕಟೇಶ್ ಸಂಜೆ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಹಲವಾರು ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ಸೇವೆ ಸಲ್ಲಿಸಿದ್ದು, ಪಿಎಸಿಎಸ್‌ನ ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನ ಬಯಸಿದ್ದೆ, ಆದರೆ ಪಕ್ಷದಿಂದ ಬೆಂಬಲ ದೊರೆಯದಿದ್ದಾಗ ಚುನಾವಣೆಗೆ ಸ್ಪರ್ಧಿಸಿ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರ ಸಹಕಾರದಿಂದ ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ ಎಂದರು.

ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡ ಎಂ.ಎಸ್.ಚನ್ನಕೇಶವ್ ಅವರ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರು ನನ್ನನ್ನು ಅಧ್ಯಕ್ಷನನ್ನಾಗಿ ಆಯ್ಕೆಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡು ಇನ್ನು ಮುಂದೆ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಲಿದ್ದೇನೆ ಎಂದು ಹೇಳಿದರು.

ಬಿ.ಕಣಬೂರು ಗ್ರಾಪಂ ಅಧ್ಯಕ್ಷ ರವಿಚಂದ್ರ, ಪಿಎಸಿಎಸ್ ನಿರ್ದೇಶಕರಾದ ಎಂ.ಎಸ್.ಅರುಣೇಶ್, ಮಹಮ್ಮದ್ ಜುಹೇಬ್, ಕೆ.ಕೆ.ಗೌತಮ್, ಗ್ರಾಪಂ ಸದಸ್ಯ ಇಬ್ರಾಹಿಂ ಶಾಫಿ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net