ಹೊಸ ಪಿಂಚಣಿ ವ್ಯವಸ್ಥೆ ರದ್ದತಿಗೆ ಹೋರಾಡೋಣ

21manju11-Web
ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮವನ್ನು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಉದ್ಘಾಟಿಸಿದರು. ಪ್ರಧಾನ ಕಾರ್ಯದರ್ಶಿ ಜಗದೀಶ ಪಾಟೀಲ, ಉಪಾಧ್ಯಕ್ಷ ಸುರೇಶ ಶೆಡಶ್ಯಾಳ ಇತರರು ಇದ್ದರು.
Published on

ಬೆಳಗಾವಿ: ನೂತನ ರಾಷ್ಟ್ರೀಯ ಪಿಂಚಣಿ ಯೋಜನೆ ಕೈಬಿಡುವಂತೆ ರಾಜ್ಯಾದ್ಯಂತ ಹೋರಾಟ ನಡೆಯಬೇಕಿದೆ. ಈ ನಿಟ್ಟಿನಲ್ಲಿ ನೌಕರರು ನಿರಂತರ ಹೋರಾಟಕ್ಕೆ ಸಜ್ಜಾಗಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಕರೆ ನೀಡಿದ್ದಾರೆ.

ನಗರದ ಸಿಪಿಎಡ್ ಮೈದಾನದಲ್ಲಿ ಜಿಲ್ಲಾ ಸರ್ಕಾರಿ ನೌಕರರ ಸಂಘದಿಂದ ಶನಿವಾರ ಹಮ್ಮಿಕೊಂಡಿದ್ದ ಸರ್ಕಾರಿ ನೌಕರರ ಮತ್ತು ಶಿಕ್ಷಕರ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೌಕರರಿಗೆ ಮಾರಕವಾಗುತ್ತಿರುವ ಎನ್‌ಪಿಎಸ್ ಯೋಜನೆ ರದ್ದುಪಡಿಸುವವರೆಗೆ ಹೋರಾಟ ಮುಂದುವರಿಸೋಣ. ನೂರು ವರ್ಷಗಳ ಸರ್ಕಾರಿ ನೌಕರರ ಸದಸ್ಯತ್ವ ಶುಲ್ಕವನ್ನು ಜಿಲ್ಲಾ ಸಂಘಟನೆಗಳಿಗೆ ವಿತರಿಸಿದ್ದು ಇದೇ ಮೊದಲು ಮತ್ತು ದಾಖಲೆ. ಸರ್ಕಾರ ಘೋಷಣೆ ಮಾಡುವ ಬಜೆಟ್ ಅನ್ನು ಸಾಕಾರಗೊಳಿಸುವ ಜವಾಬ್ದಾರಿ ಸರ್ಕಾರಿ ನೌಕರರದ್ದಾಗಿರುತ್ತದೆ. ಅಂತಹ ಮಹತ್ವದ ಕರ್ತವ್ಯ, ಸೇವೆಯಲ್ಲಿರುವ ನೌಕರರ ಹಿತಾಸಕ್ತಿ ಕಾಪಾಡುವುದು ಸಂಘಟನೆಯ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಜಗದೀಶ ಪಾಟೀಲ ಮಾತನಾಡಿ, ನಮ್ಮ ಹೋರಾಟಕ್ಕೆ ಬೆಳಗಾವಿ ಕಾರ್ಯಕ್ರಮ ವೇದಿಕೆ ಆಗಬೇಕು. ಬೇಡಿಕೆ ಈಡೇರುವವರೆಗೂ ನಮ್ಮ ಸಂಘಟನೆಗೆ ಧಕ್ಕೆ ಬರಬಾರದು ಎಂದರು. ಸಂಘಟನೆ ರಾಜ್ಯ ಉಪಾಧ್ಯಕ್ಷ ಸುರೇಶ ಶೇಡಶ್ಯಾಳ ಮಾತನಾಡಿದರು.

ಗೌರವಾಧ್ಯಕ್ಷ ವಿ.ವಿ.ಶಿವರುದ್ರಯ್ಯ, ಖಜಾಂಚಿ ಆರ್.ಶ್ರೀನಿವಾಸ, ಉಪಾಧ್ಯಕ್ಷರಾದ ಮಲ್ಲಿಕಾರ್ಜುನ ಬಳ್ಳಾರಿ, ಎಸ್.ಬಸವರಾಜು, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಕೋಲಕರ್, ಜಯಕುಮಾರ ಹೆಬಳಿ, ಶಂಕರ ಜಿ. ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net