ಬೆಂಗಳೂರು ನೂತನ ಪೊಲೀಸ್ ಕಮಿಷನರ್ ಆಗಿ ಪ್ರತಾಪ್ ರೆಡ್ಡಿ

C H Prathap Reddy
Published on

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ರಾಜ್ಯದ ನಾಲ್ವರು ಪ್ರಮುಖ ಐಪಿಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿರುವ ಸರ್ಕಾರ, ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ.

ಕಮಲ್ ಪಂತ್, ಸಿ.ಎಚ್.ಪ್ರತಾಪ್ ರೆಡ್ಡಿ, ಅಲೋಕ್​ ಕುಮಾರ್, ಆರ್​. ಹಿತೇಂದ್ರ, ಎಂ.ಎನ್. ಅನುಚೇತ್​ ವರ್ಗಾವಣೆ ಆಗಿರುವ ಐಪಿಎಸ್​ ಅಧಿಕಾರಿಗಳು.

ಇದುವರೆಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಕಮಲ್ ಪಂತ್ ಅವರನ್ನು ವರ್ಗಾವಣೆ ಮಾಡಿರುವ ಸರ್ಕಾರ, ಅವರ ಸ್ಥಾನಕ್ಕೆ ಸಿ.ಎಚ್​. ಪ್ರತಾಪ್ ರೆಡ್ಡಿ ಅವರನ್ನು ವರ್ಗಾವಣೆ ಮಾಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net