ಸರ್ಕಾರಿ ಇಲಾಖೆ ಕಟ್ಟಡಗಳಲ್ಲಿ ನೂತನ ತಂತ್ರಜ್ಞಾನ

v
ಲೋಕೋಪಯೋಗಿ ಇಲಾಖೆ ಸಿಬ್ಬಂದಿಗೆ ನಿರ್ಮಿಸಿರುವ 24 ಮನೆಗಳನ್ನು ಮಧು ಬಂಗಾರಪ್ಪ ಉದ್ಘಾಟಿಸಿದರು. ಬಲ್ಕಿಷ್ ಬಾನು, ಚಂದ್ರಭೂಪಾಲ, ರವಿಕಮಾರ್, ಗಣೇಶ್, ವಿಜಯಕುಮಾರ್ ಮುಂತಾದವರಿದ್ದರು.
Published on

ಶಿವಮೊಗ್ಗ: ಆಡಳಿತ ನಡೆಸಲು ಅನುಕೂಲವಾಗುವಂತೆ ಸರ್ಕಾರದಿಂದ ನಿರ್ಮಿಸಲಾಗುತ್ತಿರುವ ವಿವಿಧ ಇಲಾಖೆಗಳ ಕಟ್ಟಡಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲಾಗುತ್ತಿದೆ. ಶುದ್ಧ ಗಾಳಿ, ಬೆಳಕು ಇರುವಂತೆ ವಿನ್ಯಾಸ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಲೋಕೋಪಯೋಗಿ ಇಲಾಖೆಯು ನಗರದ ಬಾಲರಾಜ ಅರಸ್ ರಸ್ತೆ ಸಮೀಪ 15 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ 24 ಮನೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಕಟ್ಟಡ ಗುಣಮಟ್ಟದಿಂದ ಕೂಡಿದೆ. ಮೇಲುಸ್ತುವಾರಿ ಹಾಗೂ ನಿರ್ವಹಣೆಗೆ ಹೆಚ್ಚು ಗಮನಹರಿಸಲಾಗಿದೆ ಎಂದರು.
ಪೊಲೀಸ್ ಇಲಾಖೆ ಸಿಬ್ಬಂದಿಗೂ ವಸತಿಗೃಹಗಳ ತುರ್ತು ಅಗತ್ಯವಿರುವುದನ್ನು ಗಮನಿಸಲಾಗಿದೆ. ಶೀಘ್ರದಲ್ಲಿ ಅವರಿಗಾಗಿ ವಸತಿಗೃಹ ನಿರ್ಮಾಣದ ಬಗ್ಗೆಯೂ ಕ್ರಮವಹಿಸಲಾಗುವುದು ಎಂದು ಹೇಳಿದರು.
ವಿಧಾನಪರಿಷತ್ ಸದಸ್ಯೆ ಬಲ್ಕಿಷ್ ಬಾನು, ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್, ಗ್ಯಾರಂಟಿ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಚಂದ್ರಭೂಪಾಲ, ಸೂಪರಿಂಟೆಂಡೆಂಟ್ ಇಂಜಿನಿಯರ್ ಗಣೇಶ್, ವಿಜಯಕುಮಾರ್ ಮುಂತಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net