ವೈದ್ಯರಿಗೆ ಹೊಸ ವರ್ಷದ ಗಿಫ್ಟ್

Doctors
Published on

ಬೆಂಗಳೂರು: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ವೃಂದಗಳ ವೈದ್ಯರು ಹಾಗೂ ಆರೋಗ್ಯಾಧಿಕಾರಿಗಳ ವಿಶೇಷ ಭತ್ಯೆಗಳನ್ನು ಪರಿಷ್ಕರಿಸಿ ಆದೇಶ ಹೊರಡಿಸುವ ಮೂಲಕ ಸರ್ಕಾರ ಹೊಸ ವರ್ಷಕ್ಕೆ ವೈದ್ಯರಿಗೆ ಬಂಪರ್ ಕೊಡುಗೆ ನೀಡಿದೆ.

ಕೋವಿಡ್ ಸಂದರ್ಭದಲ್ಲಿ ವೈದ್ಯರು ನೀಡುತ್ತಿರುವ ಸೇವೆ ಪರಿಗಣಿಸಿ, ಭವಿಷ್ಯದಲ್ಲಿ ಯುವ ವೈದ್ಯರು ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸಲು ಪೋ›ತ್ಸಾಹಿಸುವ ನಿಟ್ಟಿನಲ್ಲಿ ತಜ್ಞ ವೈದ್ಯರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯಾಧಿಕಾರಿಗಳಿಗೆ 2020ರ ಸೆ.1ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ವಿಶೇಷ ಭತ್ಯೆಗಳನ್ನು ಪರಿಷ್ಕರಿಸಲಾಗಿದೆ.

ಈ ಹಿಂದೆ 2015ರಲ್ಲಿ ವಿಶೇಷ ಭತ್ಯೆಗಳನ್ನು ಪರಿಷ್ಕರಿಸಲಾಗಿತ್ತು. ಕರ್ನಾಟಕ ವೈದ್ಯಾಧಿಕಾರಿಗಳ ಸಂಘ ಸಿಜಿಎಚ್​ಸಿ ಮಾದರಿಯಲ್ಲಿ ಭತ್ಯೆ ಪರಿಷ್ಕರಿಸುವಂತೆ ಸರ್ಕಾರವನ್ನು ಕೋರಿತ್ತು. ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ವಿಶೇಷ ಭತ್ಯೆ ಪರಿಷ್ಕರಿಸಿ ಆದೇಶ ಹೊರಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net