

ಹುಬ್ಬಳ್ಳಿ: ಇಲ್ಲಿಯ ತೋಪಲಗಟ್ಟಿ ತಿಪ್ಪೆಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿದ್ದು, ಗೋಕುಲ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾತ್ರೋರಾತ್ರಿ ಹೆತ್ತ ಮಗುವನ್ನು ದುರುಳರು ತಿಪ್ಪೆಗೆ ಎಸೆದು ಹೋಗಿದ್ದಾರೆ. ದಾರಿಹೋಕರಿಗೆ ಈ ವಿಷಯ ಗೊತ್ತಾಗುತ್ತಿದ್ದಂತೆಯೇ ಪೊಲೀಸರು ಮತ್ತು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದ್ದರು. ಶವವನ್ನು ಕೆಎಂಸಿಆರ್‌ಐ ಶವಾಗಾರಕ್ಕೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.