ನೂತನ ಬಸ್ ಮಾರ್ಗಕ್ಕೆ ಚಾಲನೆ

7ss1bus sancharake chalane
Published on

ಶನಿವಾರಸಂತೆ: ರಾಜ್ಯ ರಸ್ತೆ ಸಾರಿಗೆ ನಿಗಮದ ಅರಕಲಗೂಡು ಡಿಪೋ ವ್ಯಾಪ್ತಿಯ ಮಾಗಲು ಗ್ರಾಮದಿಂದ ಅಂಕನಹಳ್ಳಿ ಮೂಲಕ ಮನೆಹಳ್ಳಿ ಮಠ ನೂತನ ಬಸ್ ಮಾರ್ಗಕ್ಕೆ ತಪೋವನ ಕ್ಷೇತ್ರದ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿ ಚಾಲನೆ ನೀಡಿದರು. ಮಠದ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಿಗೆ ರಸ್ತೆ ಸಾರಿಗೆ ಬಸ್ಸಿನ ಸೌಲಭ್ಯ ದೊರಕುವಂತಾಗಬೇಕು ಎಂದರು. ಹಲವು ವರ್ಷಗಳಿಂದ ಈ ಭಾಗಕ್ಕೆ ಸರ್ಕಾರಿ ಬಸ್ಸಿನ ಬೇಡಿಕೆ ಇತ್ತು. ಇಲ್ಲಿನ ವಿದ್ಯಾರ್ಥಿಗಳು, ರೈತರು, ಗ್ರಾಮಸ್ಥರು ಪಟ್ಟಣ, ನಗರಗಳಿಗೆ ತೆರಳಲು ಪರದಾಡುತ್ತಿದ್ದರು. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ಭೇಟಿಮಾಡಿ ಮನವಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಹೊಸ ಬಸ್ ಮಾರ್ಗದ ಸೌಲಭ್ಯ ದೊರಕಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net