

ಮಂಗಳೂರು: ನವದೆಹಲಿಯ ಇಂಡಿಯಾ ಇಂಟರ್ ನ್ಯಾಷನಲ್ ಸೆಂಟರ್‌ನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಭಾರತೀಯ ಬುದ್ಧಿಜೀವಿಗಳ ಸಮ್ಮೇಳನದಿಂದ ‘ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಛತ್ತೀಸ್‌ಗಢ ರಾಜ್ಯಪಾಲ ಬಿಸ್ವ ಭೂಷಣ ಹರಿಚರಣ್, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರಾದ ವಿ.ಗೋಪಾಲ್ ಗೌಡ ಮೊದಲಾದ ಗಣ್ಯರು ಉಪಸ್ಥಿತರಿದ್ದರು.