ಶಿಕ್ಷಣ ಸಂಸ್ಥೆಗಳಿಂದ ಕ್ರಾಂತಿಕಾರಿ ಬದಲಾವಣೆ : ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅಭಿಪ್ರಾಯ

New Project (8)
Published on

ವಿಜಯವಾಣಿ ಸುದ್ದಿಜಾಲ ಉಳ್ಳಾಲ ಶಿಕ್ಷಣ ಸಂಸ್ಥೆ ಆರಂಭದೊಂದಿಗೆ ಪ್ರತಿಯೊಂದು ಮನೆಯಲ್ಲೂ ಕ್ರಾಂತಿಕಾರಿ ಬದಲಾವಣೆ ಕಾಣಲು ಸಾಧ್ಯ. ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆ ಆರಂಭಗೊಂಡರೆ ಶಿಕ್ಷಣ ವಂಚಿತರಿಗೆ ಅನುಕೂಲವಾಗುತ್ತದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು. ಹರೇಕಳದ ನ್ಯೂಪಡ್ಪುವಿನಲ್ಲಿ ಸೋಮವಾರ ಸರ್ಕಾರಿ ಪದವಿಪೂರ್ವ ಕಾಲೇಜಿನ ಅಧಿಕೃತ ಉದ್ಘಾಟನಾ ಕಾರ್ಯಕ್ರಮದಲ್ಲಿ ವಾತನಾಡಿದರು. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್‌ಕೆಜಿ ಕಟ್ಟಡಕ್ಕೆ ಶಿಲಾನ್ಯಾಸ ಹಾಗೂ ಪ್ರತಿಭಾ ಪುರಸ್ಕಾರ ನಡೆಯಿತು. ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ತ್ಯಾಗಂ ಹರೇಕಳ ಅವರನ್ನು ಅಭಿನಂದಿಸಲಾಯಿತು. ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ, ಹರೇಕಳ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗುಲಾಬಿ, ಉಪಾಧ್ಯಕ್ಷ ಎಂ.ಪಿ.ಅಬ್ದುಲ್ ಮಜೀದ್, ನಿಕಟಪೂರ್ವ ಅಧ್ಯಕ್ಷ ಬದ್ರುದ್ದೀನ್ ಫರೀದ್ ನಗರ, ಪಜೀರ್ ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ವಲೇರಿಯನ್ ಡಿಸೋಜ, ನಿವತ್ತ ಮುಖ್ಯಶಿಕ್ಷಕ ರವೀಂದ್ರ ರೈ ಕಲ್ಲಿವಾರ್, ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಅಚ್ಚುತ ಗಟ್ಟಿ, ಗ್ರಾಪಂ ಸದಸ್ಯರಾದ ಅಬ್ದುಲ್ ಸತ್ತಾರ್ ಬಾವಲಿಗುರಿ, ಅಬೂಬಕ್ಕರ್ ಸಿದ್ಧೀಕ್, ಅನಿತಾ ಡಿಸೋಜ, ಎಸ್.ಎಂ.ಬಶೀರ್, ಪಜೀರ್ ಗ್ರಾಪಂ ವಾಜಿ ಅಧ್ಯಕ್ಷ ಭರತ್ ರಾಜ್ ಶೆಟ್ಟಿ ಪಜೀರುಗುತ್ತು, ಹರೇಕಳ ಗ್ರಾ.ಪಂ. ವಾಜಿ ಸದಸ್ಯ ಬಶೀರ್ ಉಂಬುದ ಮೊದಲಾದವರಿದ್ದರು. ತಾ.ಪಂ. ವಾಜಿ ಸದಸ್ಯ ಮಹಮ್ಮದ್ ಮುಸ್ತಫಾ ಮಲಾರ್ ಪ್ರಸ್ತಾವನೆಗೈದರು. ಪ್ರೌಢಶಾಲಾ ಮುಖ್ಯಶಿಕ್ಷಕ ಲಕ್ಷ್ಮಣ ಅವರು ಸಾಧಕ ವಿದ್ಯಾರ್ಥಿಗಳ ಹೆಸರು ವಾಚಿಸಿದರು. ಪ್ರಭಾರ ಪ್ರಾಂಶುಪಾಲ ಡಾ.ಅಬ್ದುಲ್ ರರಝಾಕ್ ಕಾರ್ಯಕ್ರಮ ನಿರೂಪಿಸಿದರು.

ಜನಪ್ರತಿನಿಧಿಗಳು ಅಧಿಕಾರಿಗಳಿಗೆ ಸೂಚನೆ ನೀಡಬಹುದು, ಆದರೆ ಫಾಲೋಅಪ್ ವಾಡುವ ಜವಾಬ್ದಾರಿ ಅಗತ್ಯ. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹಾಜಬ್ಬ ಅವರನ್ನು ನೋಡಿ ಕೆಲಸ ವಾಡುವುದು ಕಲಿಯಬೇಕು. ಪ್ರಾಥಮಿಕ ಶಾಲೆ ಬದುಕಿದರೆ ವಾತ್ರ ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಬದುಕಲು ಸಾಧ್ಯ. ಈ ಹಿನ್ನೆಲೆಯಲ್ಲಿ ಈ ಮೂರೂ ಶಾಲೆಗಳ ಶಿಕ್ಷಕರು ಒಗ್ಗಟ್ಟು ಕಾಪಾಡಿಕೊಂಡು ಮುನ್ನಡೆಯಬೇಕು. ಪ್ರಾಥಮಿಕ ಶಾಲೆಗೆ ನಾಲ್ಕು ಕೊಠಡಿಗಳು ನಿರ್ವಾಣ ಆಗಲಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿಯಾಗಲಿದೆ. ಯು.ಟಿ.ಖಾದರ್, ವಿಧಾನಸಭಾಧ್ಯಕ್ಷ ಪ್ರಸ್ತುತ 24 ವಿದ್ಯಾರ್ಥಿಗಳು ಪದವಿಪೂರ್ವ ಕಾಲೇಜಿನಲ್ಲಿ ಇದ್ದಾರೆ. ಮೂರು ಕೋಟಿ ರೂ. ಅಗತ್ಯವಿದೆ. 1.30 ಎಕರೆ ಜಮೀನು ಮೀಸಲಿದ್ದು, ನಾಲ್ಕು ಕೊಠಡಿಗಳ ಆವಶ್ಯಕತೆಯಿದೆ. ತಕ್ಷಣ ಒಂದು ಕೋಟಿ ರೂ. ಅನುದಾನ ಬಿಡುಗಡೆಗೊಳಿಸಿದರೆ ಕಾಮಗಾರಿ ಆರಂಭಿಸುತ್ತೇವೆ. ಹರೇಕಳ ಹಾಜಬ್ಬ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ https://www.vijayavani.net/bhramara-inchara-nudihabba-in-katil-from-tomorrow https://www.vijayavani.net/volleyball-tournament-10

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net