ಸರಸ್ವತಿ ವಿದ್ಯಾಲಯದಲ್ಲಿ ವಿತರಕರ ದಿನಾಚರಣೆ

Published on

ಹುಬ್ಬಳ್ಳಿ: ಇಲ್ಲಿಯ ಗೋಕುಲ ರಸ್ತೆ ರೋಟರಿ ಮಿಡ್ಟೌನ್ ಎಜುಕೇಶನ್ ಹಾಗೂ ವೆಲ್ ಫೇರ್ ಸೊಸೈಟಿಯ ರೋಟರಿ ಸರಸ್ವತಿ ವಿದ್ಯಾಲಯದಲ್ಲಿ ಬುಧವಾರ ಪತ್ರಿಕಾ ವಿತರಕರ ದಿನ ಆಚರಿಸಲಾಯಿತು.

ಶಾಲೆಯ ಇಂಟರ್ಯಾಕ್ಟ್ ಕ್ಲಬ್ ವತಿಯಿಂದ ವಿತರಕ ಪರಶುರಾಮ ಭಾಂಡಗೆ ಅವರನ್ನು ಸನ್ಮಾನಿಸಲಾಯಿತು.

38 ವರ್ಷಗಳಿಂದ ಪತ್ರಿಕೆ ವಿತರಣೆ ಕೆಲಸ ಮಾಡುತ್ತಿದ್ದು, ಈ ಕಾರ್ಯದಲ್ಲಿ ಸಂತೃಪ್ತಿ ಇದೆ. ಮಕ್ಕಳು ಮೊಬೈಲ್ ಗೀಳಿನಿಂದ ದೂರವಾಗಿ ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ಶಾಲೆಯ ಅಧ್ಯಕ್ಷ ಲಿಂಗರಾಜ ಪಾಟೀಲ್ ಅವರು ಭಾಂಡಗೆ ಅವರ ಪರಿಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಶಿಕ್ಷಕರು, ಮಕ್ಕಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net