ಪತ್ರಿಕೆ-ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಿ

21-DVD-2
Published on

ದೇವದುರ್ಗ: ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಬೇಕು ಎಂದು ಮುಖ್ಯಶಿಕ್ಷಕ ವಿಜಯಕುಮಾರ ಅತ್ತನೂರು ಹೇಳಿದರು.

ನಾಗಡದಿನ್ನಿ ಸರ್ಕಾರಿ ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ ತರಬೇತಿ ಕಾರ್ಯಕ್ರಮದಲ್ಲಿ ಸೋಮವಾರ ಮಾತಾಡಿದರು. ಅಕ್ಷರ ಜ್ಞಾನ ಒಂದೇ ಶಿಕ್ಷಣವಲ್ಲ. ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಉತ್ತಮ ಭವಿಷ್ಯ ಹಾಗೂ ವ್ಯಕ್ತಿತ್ವ ರೂಪಿಸಿಕೊಳ್ಳಬಹುದು. ಯುವಕರು ಪಠ್ಯಪುಸ್ತಕ ಜತೆಗೆ ಪತ್ರಿಕೆ, ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದರು.

ಪ್ರತಿಯೊಂದು ಕ್ಷೇತ್ರದಲ್ಲಿ ಅವಕಾಶಗಳಿದ್ದು, ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನ ನಡೆಸಲಾಗುತ್ತದೆ. ಈ ಕುರಿತು ವಿದ್ಯಾರ್ಥಿಗಳು ತಯಾರಿ ಮಾಡಿಕೊಳ್ಳಬೇಕು. ಪಠ್ಯದಲ್ಲಿ ಅಂಕಗಳಿಸುವ ಜತೆಗೆ ಸಾಮಾನ್ಯ ಜ್ಞಾನ ಬೆಳೆಸಿಕೊಳ್ಳಬೇಕು. ಸರ್ಕಾರ ವಿವಿಧ ಯೋಜನೆಗಳ ಲಾಭ ಪಡೆದು ಜೀವನದಲ್ಲಿ ಗುರಿಸಾಧಿಸಬೇಕು ಎಂದು ವಿಜಯಕುಮಾರ ಅತ್ತನೂರು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net