ಅಪಘಾತದಲ್ಲಿ ಪತ್ರಿಕೆ ವಿತರಕನಿಗೆ ಗಾಯ

WhatsApp Image 2025-05-08 at 2.43.50 PM
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನ ಪಾದಕ್ಕೆ ತೀವ್ರ ಗಾಯವಾದ ಘಟನೆ ನಗರದ ಯಾಲಕ್ಕಿ ಶೆಟ್ಟರ್ ಕಾಲನಿ ಬಳಿ ಗುರುವಾರ ಬೆಳಗ್ಗೆ ನಡೆದಿದೆ. ಮಂಜುನಾಥ ಕಾಂಬಳೆ ಗಾಯಾಳು. ಇವರು ಮನೆಗಳಿಗೆ ದಿನಪತ್ರಿಕೆ ಹಾಕುವ ಕೆಲಸ ಮಾಡುತ್ತಿದ್ದು, ಗುರುವಾರ ಎಂದಿನ0ತೆ ಬೈಕ್ ಮೇಲೆ ಹೋಗುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದಿದೆ. ಪಾದಕ್ಕೆ ತೀವ್ರ ಪೆಟ್ಟಾಗಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ಗೆ ದಾಖಲಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net