NewYear 2025; ಎಂಜಿ ರಸ್ತೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ 15 ಮೆಟ್ರಿಕ್​ ಟನ್ ತ್ಯಾಜ್ಯ ಸಂಗ್ರಹ

MG Road
Published on

ಬೆಂಗಳೂರು: 2025 ಹೊಸ ವರ್ಷವನ್ನು (NewYear) ಸಿಲಿಕಾನ್​ ಸಿಟಿ ಮಂದಿ ಸಂಭ್ರಮದಿಂದ ಭರ ಮಾಡಿಕೊಂಡಿದ್ದು, ಎಂಜಿ ರಸ್ತೆ, ಇಂದಿರಾನಗರ, ಕೋರಮಂಗಲದಲ್ಲಿ ಸಂಭ್ರಮ ಮನೆ ಮಾಡಿದ್ದು, ಯುವ ಸಮೂಹ ಹೊಸ ವರ್ಷವನ್ನು ಭರ್ಜರಿಯಾಗಿ ಭರಮಾಡಿಕೊಂಡಿದೆ. ಇನ್ನೂ ನಗರದ ಪೂರ್ವ ವಲಯ ವ್ಯಾಪ್ತಿಯ ಎಂ.ಜಿ ರಸ್ತೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಸುಮಾರು 15 ಮೆಟ್ರಿಕ್ ಟನ್ ತ್ಯಾಜ್ಯ-ಅನುಪಯುಕ್ತ ವಸ್ತುಗಳನ್ನು ಸಂಗ್ರಹಿಸಲಾಗಿದೆ.

ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ತ್ರೀಟ್, ರೆಸಿಡೆನ್ಸಿ ರಸ್ತೆ, ರಿಚ್‌ಮಂಡ್ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಕಸ್ತೂರ್ ಬಾ ರಸ್ತ್ತೆ ಸೇರಿದಂತೆ ಮುಂತಾದ ರಸ್ತೆಗಳಲ್ಲಿ ಮುಂಜಾನೆ 3.00ರಿಂದ ಸ್ವಚ್ಛತಾ ಕಾರ್ಯ ಆರಂಭಿಸಿ ಬೆಳಗ್ಗೆ 7.00ರ ವೇಳೆಗೆ ಪೂರ್ಣಗೊಳಿಸಿ ಸುಮಾರು 15 ಮೆ. ಟನ್ ತ್ಯಾಜ್ಯವನ್ನು ಬೀದಿಗಳಿಂದ ತೆರವುಗೊಳಿಸಿ ರಸ್ತೆಗಳನ್ನು ಸ್ವಚ್ಛಗೊಳಿಸಿ ನಾಗರಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

MG Road

ಸಿಬಿಡಿ ರಸ್ತೆಗಳು ಹಾಗೂ ಪಾದಚಾರಿ ಮಾರ್ಗಗಳಲ್ಲಿ ಎಸೆದಿದ್ದ ಪ್ಲಾಸ್ಟಿಕ್ ಕವರ್, ಪ್ಲಾಸ್ಟಿಕ್ ತ್ಯಾಜ್ಯ, ಚಪ್ಪಲಿಗಳು, ಮಧ್ಯದ ಬಾಟಲಿಗಳು ಸೇರಿದಂತೆ ಇನ್ನಿತರೆ ಅನುಪಯುಕ್ತ ವಸ್ತುಗಳನ್ನು ಬೇರ್ಪಡಿಸಿ ಸಂಗ್ರಸಲಾಗಿದೆ. ಪುನರ್ ಬಳಕೆಯ ಸುನಾರು 3 ಟನ್ ತ್ಯಾಜ್ಯವನ್ನು ಒಣ ತ್ಯಾಜ್ಯ ಸಂಗ್ರಹಣಾ ಘಟಕಕ್ಕೆ ಕಳುಹಿಸಲಾಗಿದೆ. ಸ್ವಚ್ಛತಾ ಕಾರ್ಯವು ಶಾಂತಿನಗರ ವಿಭಾಗದ ಘನತ್ಯಾಜ್ಯ ವಿಭಾಗದಿಂದ ಮಾಡಲಾಗಿದ್ದು, 70ಕ್ಕೂ ಹೆಚ್ಚು ಪೌರಕಾರ್ಮಿಕರು ಸ್ವಚ್ಛತಾ ಕಾರ್ಯವನ್ನು ಮಾಡಿದರು. ಈ ವೇಳೆ ಕಿರಿಯ ಆರೋಗ್ಯ ಅಧಿಕಾರಿಗಳು, ಮಾರ್ಷಲ್ ಗಳು ಮೇಲ್ವಿಚಾರಣೆಯಲ್ಲಿದ್ದು, 25 ಆಟೋ ಟಿಪ್ಪರ್‌ಗಳು, 3 ಕಾಂಪ್ಯಾಕ್ಟರ್ ಗಳು ಸ್ಥಳದಲ್ಲಿದ್ದವು.

ವಾಯುವಿಹಾರಿಗಳಿಂದ ಸ್ವಚ್ಛತೆ ಪರಿಶೀಲನೆ

ಹೊಸ ವರ್ಷಾಚರಣೆಯ ಅಂಗವಾಗಿ ಎಂಜಿ ರಸ್ತೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ ಮಾಡಿರುವ ಕುರಿತಂತೆ, ಸುಮಾರು 25 ಸ್ಥಳೀಯ ವಾಯು ವಿಹಾರಿಗಳು ಬೆಳಗ್ಗೆ 7 ಗಂಟೆಯಿಂದ 7 ಕಿ.ಮೀ ವ್ಯಾಪ್ತಿಯ ಎಲ್ಲಾ ರಸ್ತೆಗಳನ್ನು ಸುತ್ತಾಡಿ ಸ್ವಚ್ಛತೆ ಮಾಡಿರುವುದನ್ನು ಖಾತರಿಪಡಿಸಿದರು. ಅಲ್ಲದೆ ಪಾಲಿಕೆ ಮಾಡಿರುವ ಸ್ವಚ್ಚತಾ ಕಾರ್ಯಕ್ಕೆ ಅಭಿನಂದನೆಗಳನ್ನು ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net