ರಾ.ಹೆ. ಅಪಘಾತ ವಲಯ ಪರಿಶೀಲನೆ

kota-1
Published on

ಕೋಟ: ಇತ್ತೀಚಿಗಿನ ದಿನಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತಗಳು ಹೆಚ್ಚುತ್ತಿದ್ದು ಇದಕ್ಕೆ ಹೆದ್ದಾರಿ ಕಾಮಗಾರಿಯಲ್ಲಿನ ಲೋಪಗಳೇ ಕಾರಣವೆಂಬ ದೂರಿನ ಹಿನ್ನೆಲೆಯಲ್ಲಿ ಅಪಘಾತ ವಲಯ ಸ್ಥಳಗಳಿಗೆ ಬ್ರಹ್ಮಾವರ ತಹಸೀಲ್ದಾರ್ ಶ್ರೀಕಾಂತ್ ಎಸ್.ಹೆಗ್ಡೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.

ಕೋಟದ ಮಣೂರು ರಾಷ್ಟ್ರೀಯ ಹೆದ್ದಾರಿಯಿಂದ ಮಾಬುಕಳದ ಹೆದ್ದಾರಿಯ ವಿವಿಧ ಭಾಗಗಳ ಚರಂಡಿ ಹೂಳೆತ್ತುವುದು ಹಾಗೂ ಅಪಘಾತ ವಲಯಗಳ ಬಗ್ಗೆ ಮಾಹಿತಿ ಪಡೆದರು. ಪ್ರಸ್ತುತ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಹೆಚ್ಚುತ್ತಿದ್ದು ಮಳೆಗಾಲ ಸಮೀಪಿಸುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಹೆದ್ದಾರಿ ಬದಿಯಲ್ಲಿನ ಗಿಡ ಗಂಟಿಗಳನ್ನು ತೆರವುಗೊಳಿಸುವ ಬಗ್ಗೆ ಮಾಹಿತಿ ಪಡೆದರು.

ಕೋಟ ಕಂದಾಯ ಅಧಿಕಾರಿ ಮಂಜು ಬಿಲ್ಲವ, ಕೋಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಮೇಶ್, ಗ್ರಾಮ ಲೆಕ್ಕಿಗ ಚಲುವರಾಜು, ತಾಲೂಕು ಯೋಜನಾಧಕಾರಿ ಸಂದೇಶ್ ಶೆಟ್ಟಿ, ಕೋಟ ಪಂಚಾಯಿತಿ ಸದಸ್ಯ ಶೇಖರ್ ಜಿ. ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net