ರಾ.ಹೆ. ಕಾಮಗಾರಿ ವಿಳಂಬ, ಅನಿರ್ಧಿಷ್ಟಾವಧಿ ಪ್ರತಿಭಟನೆ ಎಚ್ಚರಿಕೆ

highway
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಿರ್ಮಾಣಗೊಂಡಿರುವ ಹೊಂಡಗಳು
Published on

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ- 66ರ ಕಾಮಗಾರಿ ಶೀಘ್ರ ಪೂರ್ಣಗೊಳಿಸದಿದ್ದಲ್ಲಿ ಮತ್ತೊಮ್ಮೆ ಅನಿರ್ಧಿಷ್ಟಾವಧಿ ಪ್ರತಿಭಟನೆ ಕೈಗೊಳ್ಳುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಗೌರವಾಧ್ಯಕ್ಷ ಅನ್ಸಾರ್ ಅಹಮದ್ ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದರು. ಕಾಪುವಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ವಾತನಾಡಿ, ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿ ಹಾಗೂ ಸುಂಕ ವಸೂಲಾತಿ ಕೇಂದ್ರದ ಜನವಿರೋಧಿ ನೀತಿಯಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಅಲ್ಲದೆ ಅವಾಯಕ ಜೀವಗಳು ಬಲಿಯಾಗುತ್ತಿವೆ. ಸಮಸ್ಯೆ ಗಂಭೀರತೆ ಅರಿತು ಜಿಲ್ಲಾಧಿಕಾರಿಗಳು ಹೆದ್ದಾರಿ ಕಾಮಗಾರಿ ವಹಿಸಿಕೊಂಡ ಕಂಪನಿಗೆ ಶ್ರೀ ಕಾಮಗಾರಿ ಮುಗಿಸಲು ಗಡುವು ನೀಡಬೇಕು ಎಂದರು. ಹೆಜವಾಡಿ ಸುಂಕ ವಸೂಲಾತಿ ಕೇಂದ್ರದಲ್ಲಿ ಪಡುಬಿದ್ರಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಈ ಮೊದಲು ಇದ್ದಂತೆ ಶುಲ್ಕ ರಹಿತ ಪ್ರಯಾಣಕ್ಕೆ ಅವಕಾಶ, ಸುಂಕ ವಸೂಲಾತಿ ಕೇಂದ್ರದ ಬಳಿ ಅಗತ್ಯವಾಗಿ ಬೇಕಾಗಿರುವ ಶೌಚಗೃಹ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಆಂಬುಲೆನ್ಸ್ ಸೌಲಭ್ಯ ಸೇರಿದಂತೆ ವಾಹನ ಚಾಲಕ, ಪ್ರಯಾಣಿಕರಿಗೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಟನೆ ಪ್ರಮುಖರಾದ ಸೈಯದ್ ನಿಜಾಮುದ್ದೀನ್, ಪ್ರಶಾಂತ್ ಸಾಲಿಯಾನ್, ಎಂ.ಎಸ್.ಶಾಫಿ, ಜ್ಯೋತಿ ಸೇರಿಗಾರ್, ಕಿರಣ್‌ಪ್ರತಾಪ್ ಉಪಸ್ಥಿತರಿದ್ದರು.

ಹೊಂಡ ಮುಚ್ಚದಿದ್ದಲ್ಲಿ ಅರೆಬೆತ್ತಲೆ ಶ್ರಮದಾನ

ಹೆದ್ದಾರಿಯಲ್ಲಿರು ಸೃಷ್ಟಿಯಾಗಿರುವ ಗುಂಡಿಗಳಿಗೆ ವಾಹನ ಸವಾರರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಎರಡು ದಿನಗಳೊಳಗೆ ಹೊಂಡಗಳನ್ನು ಮುಚ್ಚದಿದ್ದಲ್ಲಿ ಅರೆಬೆತ್ತಲೆ ಶ್ರಮದಾನದ ಮೂಲಕ ಪ್ರತಿಭಟನೆ ನಡೆಸುವುದಾಗಿ ಅನ್ಸಾರ್ ಅಹಮದ್ ಎಚ್ಚರಿಕೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net