ಎನ್‌ಐಎ ವಶಕ್ಕೆ ಇಬ್ಬರು

NIA
Published on

ಹುಬ್ಬಳ್ಳಿ: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ(ಎನ್‌ಐಎ)ದ ಅಧಿಕಾರಿಗಳು, ವಾಣಿಜ್ಯ ನಗರಿ ಹುಬ್ಬಳ್ಳಿಗೆ ಮಂಗಳವಾರ ಭೇಟಿ ನೀಡಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆಗೆ ಕರೆದುಕೊಂಡು ಹೋಗಿದ್ದಾರೆ.
ಕಸಬಾಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಸೋಯಿಲ್ ಮಿರ್ಜಾ ಅಲಿಯಾಸ್ ಚೋಟು ಹಾಗೂ ಅಜೀಜ್ ಅಹ್ಮದ್ ಮಿರ್ಜಾ ಎಂಬುವರನ್ನು ಬೆಳಗ್ಗೆ ವಶಕ್ಕೆ ಪಡೆದಿರುವ ಎನ್‌ಐಎ ಅಧಿಕಾರಿಗಳು, ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ ಎಂಬ ಗುಮಾನಿ ಹರಡಿದೆ. ಆದರೆ, ಸ್ಥಳೀಯ ಪೊಲೀಸರಿಗೆ ಈ ಕುರಿತು ಮಾಹಿತಿ ಇಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net