ಡಿವೈಎಸ್ಪಿ ರಾಜೀವ್ ಸಿಂಗ್, ಇನ್ಸ್ ಪೆಕ್ಟರ್ ಮಲ್ಲಿಕಾರ್ಜುನ್ ಸೇರಿದಂತೆ ಐವರು ಅಧಿಕಾರಿಗಳ ತಂಡ ಬಜಪೆ ಪೊಲೀಸ್ ಠಾಣೆಗೆ ಆಗಮಿಸಿದೆ. ನಿಷೇಧಿತ ಪಿಎಫ್‌ಐ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದರು ಎನ್ನುವ ಮಾಹಿತಿ ಆಧಾರಲ್ಲಿ ಠಾಣೆಗೆ ಕರೆಸಿ ವಿಚಾರಣೆ ನಡೆಸಿದೆ. ಕಳೆದ ವರ್ಷ 2025ರ ಆಗಸ್ಟ್ 2ರಂದು ಮಂಗಳೂರು ಹೊರವಲಯದ ಸುರತ್ಕಲ್ ಮತ್ತು ಬಟ್ಟೆ ಠಾಣೆ ವ್ಯಾಪ್ತಿಯ 14 ಸ್ಥಳಗಳ ಮೇಲೆ ದಾಳಿ ನಡೆಸಿದ್ದ ಎನ್‌ಐಎ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಒಯ್ದಿದ್ದರು. ಇದೀಗ ತಂಡ ಮತ್ತೆ ಆಗಮಿಸಿ ತನಿಖೆ ಮುಂದುವರಿಸಿದೆ.