ರಾಜ್ಯ ಮಟ್ಟಕ್ಕೆ ನಿದಾ ಬಾನು ಆಯ್ಕೆ

30blrp3
ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಗುಂಡು ಎಸೆತ, ಚಕ್ರ ಎಸೆತ, ಹ್ಯಾಮರ್ ಥ್ರೋನಲ್ಲಿ ಪ್ರಥಮ ಸ್ಥಾನ ಗಳಿಸಿ ಗಣ್ಯರಿಂದ ವೀರಾಗ್ರಣಿ ಪ್ರಶಸ್ತಿ ಪಡೆಯುತ್ತಿರುವ ದಿವ್ಯ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿ ನಿದಾ ಬಾನು.
Published on

ಬೇಲೂರು: ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬೇಲೂರಿನ ದಿವ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ನಿದಾ ಬಾನು ಗುಂಡು ಎಸೆತ, ಚಕ್ರ ಎಸೆತ, ಹ್ಯಾಮರ್ ಥ್ರೋನಲ್ಲಿ ಪ್ರಥಮ ಸ್ಥಾನ ಗಳಿಸುವುದರ ಮೂಲಕ ವೀರಾಗ್ರಣಿ ಪ್ರಶಸ್ತಿ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಬೇಲೂರಿಗೆ ಕೀರ್ತಿ ತಂದಿದ್ದಾರೆ.

ಜಿಲ್ಲಾ ಪಂಚಾಯಿತಿ ಹಾಗೂ ಹಾಸನ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ಆಯೋಜಿಇದ್ದ 14 ವರ್ಷದೊಳಗಿನ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬೇಲೂರು ದಿವ್ಯಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ನಿದಾ ಬಾನು ವಿವಿಧ ಕೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ. ಜಿಲ್ಲಾ ಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿ ನಮ್ಮ ಶಿಕ್ಷಣ ಸಂಸ್ಥೆಗೆ, ಬೇಲೂರು ತಾಲೂಕಿಗೆ ಮತ್ತು ಹಾಸನ ಜಿಲ್ಲೆಗೆ ಉತ್ತಮ ಹೆಸರು ತಂದಿರುತ್ತಾರೆ ಎಂದು ದಿವ್ಯ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿಯ ಸಂಸ್ಥಾಪಕ ಅಧ್ಯಕ್ಷ ಗೌಡೇಗೌಡ ಮತ್ತು ಶಿಕ್ಷಕ ವರ್ಗದವರು ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net