ರಾಜ್ಯಕ್ಕೆ ಪ್ರಥಮ ಸ್ಥಾನಿಯಾದ ನಿಧಿ.ಎಂ.ಪೈಗೆ ಸನ್ಮಾನ

rank
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ರಾಜ್ಯಕ್ಕೆ ಪ್ರಥಮ ರ‌್ಯಾಂಕ್ ಪಡೆದ ವಿದ್ಯಾರ್ಥಿ ನಿಧಿ.ಎಂ.ಪೈ ಅವರನ್ನು ಸನ್ಮಾನಿಸಲಾಯಿತು.
Published on

ಕೋಟ: ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಬ್ರಹ್ಮಾವರ ತಾಲೂಕಿನ ವಿದ್ಯಾರ್ಥಿಗಳು ರಾಜ್ಯಕ್ಕೆ ವಾದರಿಯಾಗಿದ್ದಾರೆ. ವಲಯದ ಎಲ್ಲ ಪ್ರೌಢಶಾಲೆಗಳ ಮುಖ್ಯಶಿಕ್ಷಕರು ಹಾಗೂ ಸಹಶಿಕ್ಷಕರು ಪಟ್ಟ ಶ್ರಮ ಹಾಗೂ ವಿದ್ಯಾರ್ಥಿಗಳು ತೋರಿದ ಉತ್ಸಾಹದಿಂದಾಗಿ ಈ ಬಾರಿ ಹಲವು ವಿದ್ಯಾರ್ಥಿಗಳು ತಾಲೂಕಿಗೆ ಹೆಮ್ಮೆ ತಂದಿದ್ದಾರೆ. ಅದರಲ್ಲೂ ಕೋಟ ವಿವೇಕ ಸಂಸ್ಥೆಯ ನಿಧಿ ಎಮ್ ಪೈ 625/625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ

ಪಡೆದಿರುವ ವಿದ್ಯಾರ್ಥಿಗಳ ಪಟ್ಟಿಯಲ್ಲಿ ಸ್ಥಾನ ಗಳಿಸಿರುವುದು ಅತೀವ ಸಂತೋಷದ ವಿಚಾರವಾಗಿದೆ ಎಂದು ಬ್ರಹ್ಮಾವರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಶಬಾನ ಅಂಜುಂ ಅಭಿಪ್ರಾಯ ವ್ಯಕ್ತಪಡಿಸಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದು ರಾಜ್ಯಕ್ಕೆ ಪ್ರಥಮ ರ‌್ಯಾಂಕ್ ಪಡೆದ ವಿದ್ಯಾರ್ಥಿ ನಿಧಿ.ಎಂ.ಪೈ ಅವರನ್ನು ಸನ್ಮಾನಿಸಿ ಮಾತನಾಡಿದರು.

ಎಸ್ಸೆಸ್ಸೆಲ್ಸಿ ನೊಡಲ್ ಅಧಿಕಾರಿ ನಾಗರಾಜ್ ಭಟ್, ಬ್ರಹ್ಮಾವರ ವಲಯದ ಪ್ರೌಢ ಶಾಲಾ ಮುಖ್ಯಶಿಕ್ಷಕರ ಸಂಫ ಅಧ್ಯಕ್ಷ ವೆಂಕಟೇಶ್ ಉಡುಪ, ಸಹ ಶಿಕ್ಷಕರ ಸಂಫ ಅಧ್ಯಕ್ಷ ಮನೋಹರ್ ಹೆಗಡೆ, ತಾಲೂಕು ಮುಖ್ಯಶಿಕ್ಷಕರ ಸಂಫ ಕಾರ್ಯದರ್ಶಿ ವೆಂಕಟೇಶ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net