ನಿಖಿಲ್ ಕುಮಾರಸ್ವಾಮಿ ಗೆಲುವು ಖಚಿತ

K Sudhakar
Published on

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಗೆಲ್ಲುತ್ತಾರೆ ಎಂದು ಸಂಸದ ಡಾ.ಕೆ.ಸುಧಾಕರ್ ವಿಶ್ವಾಸ ವ್ಯಕ್ತಪಡಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಮಪತ್ರ ಸಲ್ಲಿಕೆ ವೇಳೆ ಜನರಿಂದ ಉತ್ತಮ ಸ್ಪಂದನೆ, ಉತ್ಸಾಹ ಕಂಡುಬಂದಿದೆ. ಈಗ ಜೆಡಿಎಸ್ ಜೊತೆಗೆ ಬಿಜೆಪಿಯ ಪಾರಂಪರಿಕ ಮತಗಳಿವೆ. ನಿಷ್ಠಾವಂತ ಕಾರ್ಯಕರ್ತರು ನೂರಕ್ಕೆ ನೂರರಷ್ಟು ಒಮ್ಮತದಿಂದ ಕೆಲಸ ಮಾಡಲಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಆ ಭಾಗಕ್ಕೆ ಉತ್ತಮ ಯೋಜನೆಗಳನ್ನು ನೀಡಿದ್ದಾರೆ. ಅಲ್ಲಿ ಅನುಕಂಪದ ಅಲೆ ಕೂಡ ಇದೆ. ಎಚ್.ಡಿ.ಕುಮಾರಸ್ವಾಮಿ ಅವರು ಕೂಡ ಆ ಭಾಗಕ್ಕೆ ಉತ್ತಮ ಯೋಜನೆಗಳನ್ನು ನೀಡಲಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರಿಗೆ ನೋವು ಕೊಡಲು ಜನರು ಕೂಡ ತಯಾರಿಲ್ಲ. ಇಲ್ಲಿ ಭಾವನಾತ್ಮಕ ವಿಚಾರವೂ ಅಡಗಿದೆ. ಆದ್ದರಿಂದ ನಿಖಿಲ್ ಕುಮಾರಸ್ವಾಮಿ ಗೆಲ್ಲುವುದರಲ್ಲಿ ಎಳ್ಳಷ್ಟೂ ಸಂಶಯವಿಲ್ಲ ಎಂದು ಸುಧಾಕರ್ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net