ನಿಖಿಲ್ ಮದುವೆಗೆ ನೀಡಿದ್ದ ವಾಹನ ಪಾಸ್​ಗಳೆಷ್ಟು?

Nikhil Marriage
Published on

ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಮದುವೆಗೆ ವಿತರಿಸಿದ್ದ ವಾಹನ ಪಾಸ್​ಗಳ ವಿವರ ಒದಗಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಮತ್ತೊಮ್ಮೆ ನಿರ್ದೇಶಿಸಿದೆ. ಗೀತಾ ಮಿಶ್ರಾ ಸಲ್ಲಿಸಿರುವ ಅರ್ಜಿಯನ್ನು ಸಿಜೆ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ಮಂಗಳವಾರ ವಿಚಾರಣೆ ನಡೆಸಿತು.

ಮದುವೆ ಕಾರ್ಯಕ್ರಮಕ್ಕೆ ಎಷ್ಟು ವಾಹನ ಪಾಸ್ ನೀಡಲಾಗಿತ್ತು ಎಂಬ ಬಗ್ಗೆ ಮಾಹಿತಿ ನೀಡುವಂತೆ ಮೇ 5ರಂದೇ ಸರ್ಕಾರಕ್ಕೆ ಸೂಚಿಸಲಾಗಿತ್ತು. ಈವರೆಗೆ ಮಾಹಿತಿ ಕೊಟ್ಟಿಲ್ಲ. ಹಾಗಾದರೆ, ಕಾರ್ಯಕ್ರಮಕ್ಕೆ ವಾಹನ ಪಾಸ್ ನೀಡಲಾಗಿದೆಯೇ, ಇಲ್ಲವೇ, ಕೊಟ್ಟಿದ್ದರೆ ಎಷ್ಟು ಪಾಸ್ ಕೊಡಲಾಗಿತ್ತು ಎಂಬ ಬಗ್ಗೆ ಮುಂದಿನ ವಿಚಾರಣೆ ವೇಳೆ ವಿವರ ನೀಡುವಂತೆ ಸರ್ಕಾರಕ್ಕೆ ಮತ್ತೊಮ್ಮೆ ಸೂಚಿಸಿದ ನ್ಯಾಯಪೀಠ, ವಿಚಾರಣೆಯನ್ನು ಮೇ 18ಕ್ಕೆ ಮುಂದೂಡಿತು.

ಇದಕ್ಕೂ ಮೊದಲು ಅರ್ಜಿದಾರರ ಪರ ವಕೀಲ ಮೋಹನ್ ವಾದ ಮಂಡಿಸಿ, ಮದುವೆಗೆ ಐದಾರು ಜಿಲ್ಲೆಗಳಿಂದ ಜನ ಆಗಮಿಸಿರುವ ಸಾಧ್ಯತೆಯಿದೆ. ಆದ್ದರಿಂದ, ಎಷ್ಟು ವಾಹನಗಳಿಗೆ ಪಾಸ್ ನೀಡಲಾಗಿತ್ತು ಎಂಬ ಬಗ್ಗೆ ಸರ್ಕಾರದಿಂದ ಮಾಹಿತಿ ಪಡೆಯಬೇಕು ಎಂದು ಕೋರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net