ಯಾವ ಕ್ರಮ ತೆಗೆದುಕೊಳ್ಳುತ್ತಾರೋ ನೋಡೋಣ: ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿಕೆ

Nikhil Kumaraswamy statement about the galate case
Published on

ಮಂಡ್ಯ: ಯಾರೇ ಕಿಡಿಗೇಡಿಗಳು ಬಂದು ಏನೇ ಚೇಷ್ಟೆ ಮಾಡಿದರೂ ಕಾರ್ಯಕರ್ತರು ತಾಳ್ಮೆ ಕಳೆದುಕೊಳ್ಳಬಾರದು. ನಮ್ಮ ಉದ್ದೇಶ ಪಾದಯಾತ್ರೆ. ನಮ್ಮ ಹೋರಾಟ ಮುಡಾ ಮತ್ತು ವಾಲ್ಮೀಕಿ ಹಗರಣಗಳ ವಿರುದ್ಧ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಕಿವಿಮಾತು ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, ಮಂಡ್ಯದಲ್ಲಿ ನಡೆದ ಘಟನೆ ಬಗ್ಗೆ ಕುಮಾರಸ್ವಾಮಿ ಅವರು ಪ್ರತಿಕ್ರಿಯೆ ಕೊಟ್ಟಿದ್ದಾರೆ. ನಮ್ಮ ಕಾರ್ಯಕರ್ತರಿಗೆ ಒಂದು ಸ್ಪಷ್ಟ ಸಂದೇಶ ರವಾನೆ ಮಾಡಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಂಬಂಧ ಅತ್ಯುತ್ತಮವಾಗಿದೆ. ಇವೆಲ್ಲವನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಕಾರಣಕ್ಕೂ ಬೇರೆ ರೀತಿಯ ಘಟನೆಗಳಿಗೆ ಅವಕಾಶ ಕೊಡಬಾರದು. ಕಾರ್ಯಕರ್ತರು ತಾಳ್ಮೆಯಿಂದ ಸಮಾಧಾನಕರವಾಗಿ ವರ್ತನೆ ಮಾಡಬೇಕು ಎಂದು ಹೇಳಿದರು.

ಯಾರೇ ಕಿಡಿಗೇಡಿಗಳು ನೋವು ಕೊಟ್ಟರೂ ಅದಕ್ಕೆ ಪ್ರತಿಕ್ರಿಯೆ ಕೊಡಬೇಡಿ. ಜಿಲ್ಲೆಯ ಕಾರ್ಯಕರ್ತರು ಸ್ವಾಭಿಮಾನಿಗಳು. ಆದ್ದರಿಂದ ಸ್ವಾಭಿಮಾನಕ್ಕೆ ಧಕ್ಕೆ ಆಗಬಾರದು. ಆ ಘಟನೆ ಬಗ್ಗೆ ಕೋ ಆರ್ಡಿನೇಷನ್ ಕಮಿಟಿಯ ಎರಡು ಪಕ್ಷದ ಸದಸ್ಯರು ಕೇಂದ್ರಕ್ಕೆ ಮಾಹಿತಿ ಕೊಟ್ಟಿದ್ದಾರೆ. ಯಾವ ಕ್ರಮ ತೆಗೆದುಕೊಳ್ಳುತ್ತಾರೆ ಎನ್ನುವುದನ್ನು ಕಾದು ನೋಡೊಣ. ಭ್ರಷ್ಟ ಕಾಂಗ್ರೆಸ್ ಸರ್ಕಾರದ ಹಗರಣಗಳ ವಿರುದ್ಧ ಸದನದ ಒಳಗೆ ಮತ್ತು ಹೊರಗೆ ಹೋರಾಟ ಮಾಡಿದ್ದೇವೆ. ಮೈಸೂರು ಚಲೋ ಪಾದಯಾತ್ರೆ ಯಶಸ್ವಿಯಾಗಿ ಸಾಗುತ್ತಿದೆ. ಸಾವಿರಾರು ಕಾರ್ಯಕರ್ತರು ಹಾಗೂ ರೈತರು ನಮ್ಮ ಜತೆ ಹೆಜ್ಜೆ ಹಾಕುತ್ತಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net