ನೀಲವಂಜಿ ನಾಗರಾಜ ರಾಷ್ಟ್ರಮಟ್ಟಕ್ಕೆ ಆಯ್ಕೆ

20 KOTTUR 01
ಬೆಂಗಳೂರಿನ ಆ.19ರಂದು ಕರ್ನಾಟಕ ರಾಜ್ಯ ಸರ್ಕಾರಿ ಸಂಘಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯೋಜಿಸಿದ್ದ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ನೀಲವಂಜಿ ನಾಗರಾಜ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಬಸವರಾಜ ಮತ್ತು ವಿಜಯನಗರ ಜಿಲ್ಲೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ ಪ್ರಮುಖರಾದ ರುದ್ರಪ್ಪ ಇತರರಿದ್ದರು.
Published on

ಕೊಟ್ಟೂರು: ಬೆಂಗಳೂರಿನಲ್ಲಿ ಆ.18-19ರಂದು ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ಸಂಘದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯೋಜಿಸಿದ್ದ ಕ್ರೀಡಾ ಕೂಟದ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಉಜ್ಜಿನಿ ಗ್ರಾಮದ ನೀಲವಂಜಿ ನಾಗರಾಜ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ನೀಲವಂಜಿ ನಾಗರಾಜ 5 ಸಾವಿರ ಮೀಟರ್ ಓಟದಲ್ಲಿ ದ್ವಿತೀಯ, 10 ಸಾವಿರ ಮೀಟರ್ ಓಟದಲ್ಲಿ ಪ್ರಥಮ ಸ್ಥಾನಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಹರಪನಹಳ್ಳಿ ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಿಂದಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಆರೋಗ್ಯ ರಕ್ಷಣೆಗಾಗಿ ಪ್ರತಿನಿತ್ಯ ವ್ಯಾಯಾಮ, ಓಟದ ಅಭ್ಯಾಸ ಮಾಡುತ್ತಿದ್ದೆ. ಅದೇ ಮುಂದೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಲು ಕಾರಣವಾಯಿತು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net