

ಹನೂರು: ತಾಲೂಕಿನಲ್ಲಿ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಒಂಬತ್ತು ಜನರು ಗಾಯಗೊಂಡಿದ್ದಾರೆ.
ಅಮಾವಾಸ್ಯೆ ಹಿನ್ನೆಲೆಯಲ್ಲಿ ಚಾ.ನಗರ ತಾಲೂಕಿನ ಸರಗೂರು ಮೋಳೆ ಗ್ರಾಮದ 8 ಜನರು ಮ.ಬೆಟ್ಟಕ್ಕೆ ಕಾರಿನಲ್ಲಿ ತೆರಳಿದ್ದು, ಬೆಳಗ್ಗೆ 7.30 ರಲ್ಲಿ ಹಿಂತಿರುಗುತ್ತಿದ್ದರು. ಈ ವೇಳೆ ಎಲ್ಲೇಮಾಳ ಗ್ರಾಮ ಸಮೀಪದಲ್ಲಿ ಚಾಲಕ ನಿಯಂತ್ರಣ ತಪ್ಪಿದ ಪರಿಣಾಮ ಕಾರು ರಸ್ತೆ ಬದಿಯಲ್ಲಿನ ಜಮೀನಿಗೆ ಮಗುಚಿದೆ. ಪರಿಣಾಮ ಚಾಲಕ ಸೇರಿದಂತೆ 8 ಜನರಿಗೂ ಸಣ್ಣಪುಟ್ಟ ಗಾಯವಾಗಿದೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಗಾಯಾಳುಗಳನ್ನು ತುರ್ತು ವಾಹನದ ಮೂಲಕ ಕೊಳ್ಳೇಗಾಲದ ಸರ್ಕಾರಿ ಉಪ ವಿಭಾಗೀಯ ಆಸ್ಪತ್ರೆಗೆ ಕಳುಹಿಸಿಕೊಟ್ಟರು.
ಮತ್ತೊಂದು ಘಟನೆಯಲ್ಲಿ ಮಧ್ಯಾಹ್ನ 1.30ರ ವೇಳೆಯಲ್ಲಿ ತಾಳುಬೆಟ್ಟ ಮಾರ್ಗದ ತಿರುವಿನಲ್ಲಿ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಬೈಕ್ ಸವಾರ ಗಾಯಗೊಂಡಿದ್ದಾರೆ. ಕೆ.ಎಂ ದೊಡ್ಡಿಯ ರಾಜೇಶ್ (35) ಗಾಯಾಳು. ನರಸೀಪುರದ ಮೂವರು ಮ.ಬೆಟ್ಟಕ್ಕೆ ಕಾರಿನಲ್ಲಿ ತೆರಳುತ್ತಿದ್ದ ಎದುರು ಬಂದ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಈ ಸಂಬಂಧ ಮ.ಬೆಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿಲ್ಲ.