

ಹುಬ್ಬಳ್ಳಿ: ನಗರದ ಭಾಗಶಃ ಪ್ರದೇಶಗಳಿಗೆ ಕುಡಿಯುವ ನೀರು ಒದಗಿಸುವ ಧಾರವಾಡ ಜಿಲ್ಲೆಯ ಪ್ರಮುಖ ಜಲಮೂಲ ಕಲಘಟಗಿ ತಾಲೂಕಿನ ನೀರಸಾಗರ ಜಲಾಶಯ ಭರ್ತಿಯಾಗಿದೆ.
ಕಳೆದ ಒಂದು ವಾರದಿಂದ ಬಿಟ್ಟೂಬಿಡದೇ ಸುರಿದ ಮಳೆಯಿಂದಾಗಿ ಗುರುವಾರ ಸಂಜೆ ವೇಳೆಗೆ ಜಲಾಶಯ ತುಂಬಿಕೊಂಡಿದೆ.
ಸ್ವಲ್ಪ ಪ್ರಮಾಣದಲ್ಲಿ ಕೋಡಿ ಬಿದ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಇನ್ನಷ್ಟು ಮಳೆಯಾದರೆ ದೊಡ್ಡ ಪ್ರಮಾಣದಲ್ಲಿ ನೀರು ಹೊರ ಚೆಲ್ಲುವುದರಿಂದ ನೋಡಲು ರಮಣೀಯವಾಗಿರುತ್ತದೆ. ಪ್ರವಾಸಿಗರನ್ನು ಆಕರ್ಷಿಸಲಿದೆ.