ಪವರ್‌ಲಿಫ್ಟಿಂಗ್‌ನಲ್ಲಿ ನಿರ್ಮಲಾ ರನ್ನರ್‌ಅಪ್: ಕ್ರೀಡೆ ಜತೆಗೆ ರಂಗಭೂಮಿಯಲ್ಲೂ ಸಕ್ರಿಯ

Nirmala runner-up in powerlifting competition Mandya
Published on

ಮಂಡ್ಯ: ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಮಧುರ ಮಂಡ್ಯ ರಂಗಕಲಾ ಟ್ರಸ್ಟ್‌ನ ಹಿರಿಯ ನಿರ್ದೇಶಕಿ ಎನ್.ನಿರ್ಮಲಾ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಕರ್ನಾಟಕ ಪವರ್‌ಲಿಫ್ಟಿಂಗ್ ಅಸೋಸಿಯೇಷನ್‌ನಿಂದ ಆಯೋಜಿಸಿದ್ದ ಸ್ಪರ್ಧೆಯಲ್ಲಿ ಸಾಧನೆ ಮಾಡಿದ್ದಾರೆ. ಇನ್ನು ಮೈಸೂರು ಸಿಪಿಸಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಅಧ್ಯಾಪಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ನಿರ್ಮಲಾ, ಕಳೆದ ಮೂರು ವರ್ಷದಿಂದ ಸತತವಾಗಿ ಮೈಸೂರು ಜಿಲ್ಲಾ ಸರ್ಕಾರಿ ನೌಕರರ ಸಾಂಸ್ಕೃತಿಕ ಸ್ಪರ್ಧೆಯ ನೃತ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಅಂತೆಯೇ ರಾಜ್ಯಮಟ್ಟದಲ್ಲಿ ಕಳೆದ ಎರಡು ವರ್ಷ ಪ್ರಥಮ ಸ್ಥಾನ ಪಡೆದ ಹೆಗ್ಗಳಿಕೆ ಹೊಂದಿದಿದ್ದಾರೆ. ಈ ವರ್ಷವೂ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದಾರೆ.

ಈಕೆ ರಂಗಭೂಮಿ ಕಲಾವಿದೆ ಮತ್ತು ಹಾಡುಗಾರ್ತಿಯಾಗಿದ್ದಾರೆ. ಮಾತ್ರವಲ್ಲದೆ ರಾಮ, ಕೃಷ್ಣ, ಕರ್ಣ, ಸೀತೆ, ಆಂಜನೇಯ ಪಾತ್ರ ಹಾಗೂ ಸಾಮಾಜಿಕ ನಾಟಕದಲ್ಲಿ ಅಭಿನಯಿಸಿದ್ದಾರೆ. ಮಹಿಳಾ ತಂಡ ಕಟ್ಟಿಕೊಂಡು ಅನೇಕ ಪೌರಾಣಿಕ ನಾಟಕ ಪ್ರದರ್ಶನ ನೀಡುವ ಸೇವೆ ಮಾಡುತ್ತಿದ್ದಾರೆ. ಇದಲ್ಲದೆ ಬಡ ವಿದ್ಯಾರ್ಥಿಗೆ ಕಲಿಕಾ ಸಾಮಗ್ರಿಯನ್ನು ಉಚಿತವಾಗಿ ಕೊಡುವ ಮೂಲಕ ಮಾದರಿಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net