

ಬೆಂಗಳೂರು: ಒಕ್ಕಲಿಗ ಯುವ ಬ್ರಿಗೇಡ್ ಹಾಗೂ ಎನ್ಆರ್ಐ ಒಕ್ಕಲಿಗ ಬ್ರಿಗೇಡ್ ವತಿಯಿಂದ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಹುಟ್ಟುಹಬ್ಬದ ಪ್ರಯುಕ್ತ ನಗರದಲ್ಲಿ ಸಾರ್ವಜನಿಕರಿಗೆ ಉಚಿತ ನೇತ್ರ ಮತ್ತು ದಂತ ಚಿಕಿತ್ಸೆ ಶಿಬಿರ ಆಯೋಜಿಸಲಾಗಿತ್ತು.
ಸಾಕಷ್ಟು ಸಂಖ್ಯೆಯಲ್ಲಿ ಜನರು ಉಚಿತ ದಂತ ಹಾಗೂ ನೇತ್ರ ಚಿಕಿತ್ಸೆಯ ಲಾಭ ಪಡೆದುಕೊಂಡರು. ಈ ಸಂದರ್ಭದಲ್ಲಿ ಒಕ್ಕಲಿಗ ಯುವ ಬ್ರಿಗೇಡ್ ಹಾಗೂ ಎನ್ಆರ್ಐ ಒಕ್ಕಲಿಗ ಬ್ರಿಗೇಡ್ನ ಪ್ರಮುಖರು ಹಾಗೂ ಕಾರ್ಯಕರ್ತರು ಸಹಕರಿಸಿದರು.