ನಿಶಾ ರೀನಾ ನಜರತ್‌ಗೆ ಪಿಎಚ್.ಡಿ ಪದವಿ

blm (2)
Published on

ಕಾರ್ಕಳ: ಬಂಟಕಲ್ಲಿನ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿ ನಿಶಾ ರೀನಾ ನಜರತ್‌ಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಸಂಸ್ಥೆಯ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥೆ ಲೊಲಿಟ ಪ್ರಿಯಾಕ್ಯಾಸ್ತಲಿನೋ ಮಾರ್ಗದರ್ಶನದಲ್ಲಿ ಮಂಡಿಸಿದ ಎ ಸ್ಟಡಿ ಆನ್ ಕಂಪ್ಲೀಟ್ ಕಲರಿಂಗ್ಸ್ ಆ್ಯಂಡ್ ಸೆಟ್ ಕಲರಿಂಗ್ಸ್ ಆಫ್ ಡೈಗ್ರಾಫ್ಸ್ ಎಂಬ ಸಂಶೋಧನಾ ಪ್ರಬಂಧಕ್ಕೆ ಪಿಎಚ್.ಡಿ ಪದವಿ ನೀಡಲಾಗಿದೆ.

ನಿಶಾ ರೀನಾ ನಜರತ್ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಶ್ರೀಸೋದೆ ವಾದಿರಾಜ ಮಠ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಡಾ.ರಾಧಾಕೃಷ್ಣ ಎಸ್.ಐತಾಳ್, ಸಂಸ್ಥೆಯ ಪ್ರಾಂಶುಪಾಲ ಡಾ.ತಿರುಮಲೇಶ್ವರ ಭಟ್ ಮತ್ತು ಸಂಸ್ಥೆಯ ಬೋಧಕ-ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net