

ಧಾರವಾಡ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ದೆಹಲಿಯಲ್ಲಿ ಮಂಗಳವಾರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಧಾರವಾಡದ ಶಾಸಕ ಅರವಿಂದ ಬೆಲ್ಲದ ಭೇಟಿ ಮಾಡಿದರು. ಹು-ಧಾ ಪಶ್ಚಿಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ರಸ್ತೆ ಕಾಮಗಾರಿಗಳಿಗೆ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಶಾಸಕರಾದ ಎಂ.ಆರ್.ಪಾಟೀಲ, ಮಹೇಶ ಟೆಂಗಿನಕಾಯಿ ಇದ್ದರು.