

ಉಡುಪಿ: ನಿಟ್ಟೂರು ಪ್ರೌಢಶಾಲೆಯ ಪ್ರತಿಭಾನ್ವಿತ ಬಡ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಪಿ.ಎಲ್. ಅಣ್ಣಾಜಿ ರಾವ್ ಸ್ಮಾರಣಾರ್ಥ ಪಿ.ಎಲ್.ಎನ್. ರಾವ್ ಪ್ರಾಯೋಜಕತ್ವದಲ್ಲಿ 30 ವಿದ್ಯಾರ್ಥಿಗಳಿಗೆ 36000 ರೂ. ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಗುರುವಾರ ಶಾಲಾ ಸಭಾಂಗಣದಲ್ಲಿ ಜರಗಿತು.
ನಿಟ್ಟೂರು ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿ ಮುರಲಿ ಕಡೆಕಾರ್ ಮಾತನಾಡಿ, ಹೆತ್ತವರು ತಮ್ಮ ಮಕ್ಕಳ ಉತ್ತಮ ಕಲಿಕೆಗಾಗಿ ಸಮಯವನ್ನು ಮೀಸಲಿಡುವುದರೊಂದಿಗೆ ಶಿಕ್ಷಕರು ಮತ್ತು ಶಾಲೆಯೊಂದಿಗೆ ನಿರಂತರ ಸಂಪರ್ಕ ಹೊಂದಿರಬೇಕು ಎಂದರು.
ಶಾಲೆಯ ಹಳೆವಿದ್ಯಾರ್ಥಿ ಕೃಷ್ಣಮೂರ್ತಿ ಭಟ್ ಪೂತ್ತೂರು ವಿದ್ಯಾರ್ಥಿವೇತನವನ್ನು ವಿತರಿಸಿದರು. ನಿವೃತ್ತ ಅಧ್ಯಾಪಕ ಎಚ್.ಎನ್. ಶೃಂಗೇಶ್ವರ ಪಿ.ಎಲ್. ಅಣ್ಣಾಜಿ ರಾವ್ ದತ್ತಿನಿಧಿಯ ಕುರಿತು ಮಾತನಾಡಿದರು. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಕಮಲಾಕ್ಷ ಶೇಟ್, ಹಿಂದುಳಿದ ವರ್ಗಗಳ ವಸತಿನಿಲಯದ ಮೇಲ್ಚಿಚಾರಕ ಮಂಜುನಾಥ ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯಿನಿ ಅನಸೂಯ ಸ್ವಾಗತಿಸಿದರು. ಶಿಕ್ಷಕ ದೇವದಾಸ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ನಮಿತಾಶ್ರೀ ವಂದಿಸಿದರು.