ಸುಳೇಭಾವಿ ಗ್ರಾಮದಲ್ಲಿ ನೇಕಾರ ಆತ್ಮಹತ್ಯೆ

IMG-20240904-WA0040.jpg
Published on

ಬೆಳಗಾವಿ: ಸಾಲಬಾಧೆಯಿಂದ ಬೇಸತ್ತು ನೇಕಾರನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ಬುಧವಾರ ನಡೆದಿದೆ.

ಸುಳೇಭಾವಿ ಗ್ರಾಮದ ಪರುಶರಾಮ ವಾಗೂಕರ(47) ಎಂಬ ನೇಕಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪರುಶರಾಮ ನೇಕಾರಿಕೆ ಉದ್ಯೋಗಕ್ಕಾಗಿ ಸಾಲ ಮಾಡಿದ್ದರು. ಉದ್ಯೋಗ ಸರಿಯಾಗ ನಡೆಯದೇ ನಷ್ಟ ಅನುಭವಿಸಿದ್ದರು. ಸಾಲಬಾಧೆಯಿಂದ ಬೇಸತ್ತಿದ್ದರು. ಪತ್ನಿ ಹಾಗೂ ಮಗಳು ಬೆಳಗಾವಿಗೆ ಹೋಗಿದ್ದರು. ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net