ಚಿಗರಿ ಬಸ್ ವ್ಯತ್ಯಯ

Published on

ಹುಬ್ಬಳ್ಳಿ: ಧಾರವಾಡದಲ್ಲಿ ಮಾ. 26ರಂದು ಮತ್ತು ಮಾರ್ಚ್ 29ರಂದು ಹುಬ್ಬಳ್ಳಿ ನಗರದಲ್ಲಿ ಹೋಳಿ ಹುಣ್ಣಿಮೆ ರಂಗ ಪಂಚಮಿ ಆಚರಣೆ ಪ್ರಯುಕ್ತ ಆ ದಿನದಂದು ಬೆಳಗ್ಗೆ 6ರಿಂದ ರಾತ್ರಿ 11ರ ವರೆಗೆ ಅವಳಿನಗರ ಮಧ್ಯದ ಬಿಆರ್ಟಿಎಸ್ ಚಿಗರಿ ಬಸ್‌ಗಳ ಕಾರ್ಯಾಚರಣೆ ಸ್ಥಗಿತಗೊಳಿಸಲಾಗುತ್ತದೆ.

ಈ ಅವಧಿಯಲ್ಲಿ ಹುಬ್ಬಳ್ಳಿ- ಧಾರವಾಡ ಮಧ್ಯದ ಮಿಶ್ರ ಪಥದಲ್ಲಿ ವಾಯವ್ಯ ಸಾರಿಗೆ ಸಂಸ್ಥೆಯ ಸಾಮಾನ್ಯ ಸಾರಿಗೆ ಬಸ್ಗಳು ಸಂಚರಿಸಲಿವೆ. ನಾನ್ ಬಿಆರ್ಟಿಎಸ್ ಬಸ್ಗಳಲ್ಲಿ ಚಿಗರಿ ಪ್ರಯಾಣಿಕರು ಮಾಸಿಕ ಪಾಸ್, ಸ್ಮಾರ್ಟ್ ಕಾರ್ಡ್ ತೋರಿಸಿ ಪ್ರಯಾಣ ಮಾಡಲು ಅನುಮತಿಸಲಾಗಿದೆ.

ಪ್ರಯಾಣಿಕರು ಸಂಸ್ಥೆಯೊಂದಿಗೆ ಸಹಕರಿಸುವಂತೆ ವಾಕರಸಾ ಸಂಸ್ಥೆಯ ನಗರ ಸಾರಿಗೆ ವಿಭಾಗದ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net