ಗುಣಮಟ್ಟದಲ್ಲಿ ರಾಜೀ ಇಲ್ಲ

shah bazar
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಕೈಗೊಂಡು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು. ಕಾಮಗಾರಿ ಕಳಪೆಯಾದರೆ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಕ್ರಮ ವಹಿಸಲಾಗುವುದು ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

ಹುಬ್ಬಳ್ಳಿಯ ವಾರ್ಡ್ ಸಂಖ್ಯೆ 64ರಲ್ಲಿನ ಷಾ ಬಜಾರ್ ಒಳ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭಾನುವಾರ ಚಾಲನೆ ನೀಡಿ ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿಗೆ ನೂರಾರು ಕೋಟಿ ರೂ. ಅನುದಾನ ತಂದು ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಹೀಗಾಗಿ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಗುಣಮಟ್ಟಕ್ಕೆ ಒತ್ತು ನೀಡಬೇಕು. ತ್ವರಿತವಾಗಿ ಸಾರ್ವಜನಿಕ ಸೇವೆಗೆ ಲಭ್ಯವಾಗುವಂತೆ ನಿಗಾ ವಹಿಸಬೇಕೆಂದರು.

ಪಾಲಿಕೆ ಸದಸ್ಯೆ ಪೂಜಾ ಶೇಜವಾಡಕರ್, ವಾಕರಸಾ ಸಂಸ್ಥೆ ಮಾಜಿ ನಿರ್ದೇಶಕ ಆಸೀಫ್ ಬಳ್ಳಾರಿ, ಮುಖಂಡರಾದ ಮುಷ್ತಾಕ್ ಬ್ಯಾಳಿ, ಅನೀಸ್ ನಾಯಕ, ಕಾಸೀಂ ಸಾಬ್ ಬ್ಯಾಳಿ, ಆಯೂಬ್, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net