

ಯಲಬುರ್ಗಾ:ಸ್ಥಳೀಯ ಪಪಂ ಅಧ್ಯಕ್ಷ ಅಂದಯ್ಯ ಕಳ್ಳಿಮಠ ಅವರ ವಿರುದ್ಧ ಅವಿಶ್ವಾಸ ಮಂಡಿಸಲು ದಿನಾಂಕ ನಿಗದಿಪಡಿಸುವಂತೆ ಬಿಜೆಪಿ-ಕಾಂಗ್ರೆಸ್ ಸದಸ್ಯರು ಬುಧವಾರ ಮುಖ್ಯಾಧಿಕಾರಿ ನಾಗೇಶ ಅವರಿಗೆ ಮನವಿ ಸಲ್ಲಿಸಿದರು.
ಪಪಂ ಅಧ್ಯಕ್ಷ ಅಂದಯ್ಯ ಕಳ್ಳಿಮಠ ಅಧಿಕಾರ ವಹಿಸಿಕೊಂಡಾಗಿನಿಂದ ಈವರೆಗೆ ಉಪಾಧ್ಯಕ್ಷರು ಮತ್ತು ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಂದು ಸಾಮಾನ್ಯ ಸಭೆಯನ್ನೂ ನಡೆಸಿಲ್ಲ.
ವಾರ್ಡ್‌ಗಳಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ. ಲೇಔಟ್ ಅನುಮೋದನೆಯಾಗದೆ ಫಾರ್ಮ ನಂಬರ್ 3 ವಿತರಿಸುತ್ತಿದ್ದಾರೆ. ಉಪಾಧ್ಯಕ್ಷರು ಮತ್ತು ಸದಸ್ಯರುಗಳ ಸಭೆ ಮಾಡದೆ ತಮಗೆ ಬೇಕಾದ ಹಾಗೆ ಬಿಲ್ ಪಾಸ್ ಮಾಡಿಕೊಳ್ಳುತ್ತಿದ್ದಾರೆ. ಕೇವಲ ಬೆರಳೆಣಿಕೆ ಸದಸ್ಯರಿಗೆ ಫಾರ್ಮ ನಂಬರ್ 3 ನೀಡುತ್ತಿದ್ದಾರೆ. ಅಧ್ಯಕ್ಷರು ತಮ್ಮ ವಾರ್ಡ್‌ನ ಅಭಿವೃದ್ಧಿ ಬಗ್ಗೆ ಮಾತ್ರ ಚಿಂತಿಸುತ್ತಿದ್ದಾರೆ. ಪಟ್ಟಣದ ಉಳಿದ ಸದಸ್ಯರ ವಾರ್ಡ್‌ಗಳ ಸಮಸ್ಯೆಗಳ ಬಗ್ಗೆ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ ಎಂದು ದೂರಿದರು.