ಕಾಂಗ್ರೆಸ್‌ನಲ್ಲಿ ಯಾವುದೇ ಅಸಮಾಧಾನ ಇಲ್ಲ: ಸಚಿವ ಬಿ.ನಾಗೇಂದ್ರ

BLY- 22-2
Published on

ಬಳ್ಳಾರಿ : ಕಾಂಗ್ರೆಸ್‌ನಲ್ಲಿ ಯಾವುದೇ ಅಸಮಾಧಾನ ಇಲ್ಲ. ಎಲ್ಲರೂ ಒಟ್ಟಿಗೆ ಇದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಹೇಳಿದರು.

ನಗರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ವಿರುದ್ಧ ಬಿ.ಕೆ.ಹರಿಪ್ರಸಾದ್ ಅಸಮಾಧಾನ ಹಿನ್ನೆಲೆ ಪ್ರತಿಕ್ರಿಯಿಸಿದ ಅವರು, ಬಿ.ಕೆ.ಹರಿಪ್ರಸಾದ್ ಒಬ್ಬ ಹಿರಿಯ ರಾಜಕಾರಣಿ. ಯಾರೋ ಒಬ್ಬರು ಮನಸ್ಸು ಮಾಡಿ ಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಕೆಳಗೆ ಇಳಿಸಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಅವರ ವಿರುದ್ಧ ಟೀಕೆ ಟಿಪ್ಪಣಿ ಬರುತ್ತೆ ಅದು ಸಾಮಾನ್ಯ. ಸಿದ್ದರಾಮಯ್ಯ ಅವರು ರಾಜ್ಯವನ್ನು ಸಾಮೂಹಿಕ ನಾಯಕತ್ವದಲ್ಲಿ ಕೊಂಡೊಯ್ಯುತ್ತಿದ್ದಾರೆ. ದೇವರಾಜ ಅರಸು ಅವರ ನಂತರ ಹಿಂದುಳಿದ ವರ್ಗಗಳ ಸರ್ವೋಚ್ಚ ನಾಯಕ ಸಿದ್ದರಾಮಯ್ಯ. 34 ಜನ ಮಾತ್ರ ಸಚಿವ ಸ್ಥಾನ ನೀಡಲು ಅವಕಾಶವಿದೆ. ಅವರಿಗೆ ಮಂತ್ರಿ ಸ್ಥಾನ ಸಿಕಿಲ್ಲ ಅದಕ್ಕೆ ಅವರಿಗೆ ಅಸಮಾಧಾನ ಸಾಮಾನ್ಯ. ಹರಿಪ್ರಸಾದ್ ಅವರಿಗೆ ಯಾವುದೇ ಜವಾಬ್ದಾರಿ ನೀಡಿದರು ನಿಭಾಯಿಸಬಲ್ಲರು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net