ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ

Boat Jatti
Published on

ಮಂಗಳೂರು: ಅರಬ್ಬಿ ಸಮುದ್ರ ಆ.8ರ ತನಕ ಪ್ರಕ್ಷುಬ್ಧವಾಗುವ ಸಾಧ್ಯತೆ ಇರುವುದರಿಂದ ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಮೀನುಗಾರಿಕಾ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಈಗಾಗಲೇ ಮೀನುಗಾರಿಕೆಗೆ ತೆರಳಿರುವ ಎಲ್ಲ ಮೀನುಗಾರಿಕಾ ದೋಣಿಗಳನ್ನು ಕೂಡಲೇ ದಡ ಸೇರಿಸಬೇಕೆಂದೂ ಅವರ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net