

ದಸರಾ ಮಹೋತ್ಸವದ ಜತೆಗೆ ನಾನಾ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ವರ್ಷ ಪೂರ್ತಿ ವಿದೇಶಿ ಪ್ರವಾಸಿಗರನ್ನು ಮೈಸೂರಿನತ್ತ ಸೆಳೆಯಲು ಯೋಜನೆ ರೂಪಿಸಬೇಕು ಎಂದು ಮೈಸೂರು ಸಂಘ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಬಿ.ಎಸ್.ಪ್ರಶಾಂತ್ ಒತ್ತಾಯಿಸಿದ್ದಾರೆ.
ಬಜೆಟ್‌ನಲ್ಲಿ ಪ್ರವಾಸೋದ್ಯಮ ಇಲಾಖೆಗೆ 5 ರಿಂದ 6 ಸಾವಿರ ಕೋಟಿ ರೂ. ನೀಡಬೇಕು. ಆಗ ಪ್ರವಾಸೋದ್ಯಮ ಅಭಿವೃದ್ಧಿಗೆ ಅನುಕೂಲವಾಗುತ್ತದೆ. ಆದರೆ, ಯಾವುದೇ ಸರ್ಕಾರಕ್ಕೆ ಪ್ರವಾಸೋದ್ಯಮ ಅಭಿವೃದ್ಧಿ ಮಾಡಬೇಕು ಎಂಬ ಉದ್ದೇಶ ಇಲ್ಲವಾಗಿದೆ. ಈ ಬಾರಿ ಬಜೆಟ್‌ನಲ್ಲಾದರೂ ಪ್ರವಾಸೋದ್ಯಮಕ್ಕೆ ಹೆಚ್ಚಿ ಒತ್ತು ನೀಡಬೇಕು.