

ಮೈಸೂರು: ಪಿಎಂ ಬದಲಾವಣೆ ಮಾಹಿತಿ ಇಲ್ಲ : ಪ್ರಧಾನಿ ನರೇಂದ್ರ ಮೋದಿ ಸ್ಥಾನಕ್ಕೆ ಮತ್ತೊಬ್ಬರನ್ನು ತರುವ ವಿಚಾರದ ಕುರಿತು ನನಗೆ ಮಾಹಿತಿ ಇಲ್ಲ ಎಂದು ಶಾಸಕ ಟಿ.ಎಸ್. ಶ್ರೀವತ್ಸ ಹೇಳಿದರು.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾಯಕತ್ವದ ಬದಲಾವಣೆ ಕುರಿತು ಸ್ಥಳೀಯವಾಗಿ ಯಾವುದೇ ಮಾಹಿತಿ ಇಲ್ಲ. ಈ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆದಿರುವ ಕುರಿತು ನನಗೆ ಮಾಹಿತಿ ಇಲ್ಲ ಎಂದರು.
ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ, ನರೇಂದ್ರ ಮೋದಿಗೆ ಪರ್ಯಾಯ ನಾಯಕರು ಬಿಜೆಪಿಯಲ್ಲಿ ಬಹಳಷ್ಟು ಮಂದಿ ಇದ್ದಾರೆ. ಗುಜರಾತ್‌ನಲ್ಲಿ ಕೇಶುಭಾಯಿ ಪಟೇಲ್ ನಂತರ ಮುಂದೆ ಯಾರು ನಾಯಕರು ಎಂಬ ಪ್ರಶ್ನೆ ಮೂಡಿದಾಗ ನರೇಂದ್ರ ಮೋದಿ ಅವರಿಗೆ ನಾಯಕತ್ವ ವಹಿಸಲಾಯಿತು. ನಂತರ ಅವರು ವಿಶ್ವ ನಾಯಕರಾಗಿ ಬೆಳೆದಿರುವುದು ಇತಿಹಾಸ ಎಂದು ಹೇಳಿದರು.