

ಹಾನಗಲ್ಲ: ಕೂಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬ ಕೆಲಸವಿಲ್ಲದೆ ಮನೆಯಲ್ಲಿದ್ದು ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಟನೆ ತಾಲೂಕಿನ ಕಂಚಿನೆಗಳೂರು ಗ್ರಾಮದಲ್ಲಿ ಗುರುವಾರ ನಡೆದಿದೆ.
ಗ್ರಾಮದ ಮಂಜಪ್ಪ ಗುಡ್ಡಪ್ಪ ಜೊಲಿ (32) ಮೃತ ವ್ಯಕ್ತಿ.
ಈತ ಕೆಲಸ ಬಿಟ್ಟು ಮನೆಯಲ್ಲಿ ಇದ್ದಿದ್ದರಿಂದ ಬೇಸರಗೊಂಡು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಆಡೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.