

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲೆಯಲ್ಲಿ ಸತತ ಮಳೆ ಸುರಿಯುತ್ತಿದೆ. ಸಂಭಾವ್ಯ ಅವಘಡಗಳಿಂದಾಗುವ ಸಮಸ್ಯೆಗಳ ನಿರ್ವಹಣೆಗೆ ಎಲ್ಲ ಇಲಾಖೆಗಳ ಅಽಕಾರಿ, ಸಿಬ್ಬಂದಿ ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಽಕಾರದ ಅಧ್ಯಕ್ಷೆ ಹಾಗೂ ಜಿಲ್ಲಾಽಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.
ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ಮುಂದಿನ 2 ತಿಂಗಳವರೆಗೆ ಭಾರಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಅಽಕಾರಿ, ಸಿಬ್ಬಂದಿ ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಮಳೆಯಿಂದ ಎದುರಾಗುವ ತೊಂದರೆಗಳಿಗೆ ಸ್ಪಂದಿಸಬೇಕು. ಅನಿವಾರ್ಯ ಪರಿಸ್ಥಿತಿಯಲ್ಲಿ ಮಾತ್ರ ಪೂರ್ವಾನುಮತಿ ಪಡೆದು ರಜೆ ಪಡೆಯಬೇಕು. ಈ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಽಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.