ರಾಜ್ಯದ ಜನತೆಗೆ ಆತಂಕ ಬೇಡ, ಮತ್ತೆ ಲಾಕ್ ಡೌನ್ ಇಲ್ಲ: ಗೃಹ ಸಚಿವ ಬಸವರಾಜ ಬೊಮ್ಮಾಯಿ

Basavaraja Bommai
Published on

ಬೆಂಗಳೂರು: ಕರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚಳವಾಗುತ್ತಿದ್ದರೂ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿ ಮಾಡಲ್ಲ, ಜನರು ಆತಂಕಗೊಳ್ಳುವುದು ಬೇಡವೆಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಜನರು ಭಯ-ಭೀತಿ ಬಿಟ್ಟು ಜಾಗ್ರತೆಯಿಂದ ಇದ್ದು, ಸುರಕ್ಷತಾ ಕ್ರಮಗಳನ್ನು ಪಾಲಿಸಿದರೆ ಸೋಂಕು ದೂರವಾಗಲಿದೆ ಎಂದು ಸಲಹೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸ್ವಚ್ವತೆ, ಸ್ಯಾನಿಟೈಸರ್, ಮಾಸ್ಕ್ ಬಳಕೆ, ಸುರಕ್ಷಿತ ಅಂತರ ಕಾಯ್ದುಕೊಂಡು ಸೋಂಕು ನಿಯಂತ್ರಿಸಲು ಸರ್ಕಾರಕ್ಕೆ ಸಹಕರಿಸಬೇಕು ಎಂದರು.

ಬೆಂಗಳೂರಿನಲ್ಲೇ ಇರಿ

ಲಾಕ್​ಡೌನ್ ಮಾಡುತ್ತಾರೆ ಎಂಬ ಭಯದಿಂದ ಬೆಂಗಳೂರು ಬಿಟ್ಟು ಹೋಗಬೇಡಿ. ಇಲ್ಲಿಯೇ ಇರಿ ಸುರಕ್ಷಿತವಾಗಿರಿ. ಈಗಾಗಲೇ ಮುಖ್ಯಮಂತ್ರಿಗಳು ಮತ್ತೆ ಲಾಕ್ ಡೌನ್ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ. ಯಾರೊಬ್ಬರೂ ಗಾಬರಿಯಾಗುವ ಅಗತ್ಯವಿಲ್ಲ ಎಂದು ಗೃಹ ಸಚಿವರು ಆತ್ಮಸ್ಥೈರ್ಯ ತುಂಬಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net