ಇನ್ನು ಕೇಂದ್ರ ಸರ್ಕಾರದ ಜವಾಬ್ದಾರಿ: ಮಧು ಬಂಗಾರಪ್ಪ

minister madhu bangarappa
ಸಚಿವ ಮಧು ಬಂಗಾರಪ್ಪ
Published on

ಶಿವಮೊಗ್ಗ: ಶರಾವತಿ ಮುಳುಗಡೆ ಸೇರಿ ಇಡೀ ಜಿಲ್ಲೆಯ ಅರಣ್ಯ ಸಮಸ್ಯೆಗಳನ್ನು ಬಗೆಹರಿಸುವ ಸಂಬಂಧ ವಿಧಾನಸಭೆ ಚುನಾವಣಾ ಪೂರ್ವ ಜನಾಕ್ರೋಶ ಪಾದಯಾತ್ರೆಯಲ್ಲಿ ಕೊಟ್ಟ ಭರವಸೆಯಂತೆ ರಾಜ್ಯ ಸರ್ಕಾರ ನಡೆದುಕೊಂಡಿದೆ. ಇನ್ಮುಂದೆ ಬಹುಕಾಲದ ಸಮಸ್ಯೆಗಳಿಗೆ ಶಾಶ್ವತ ಮುಕ್ತಿ ನೀಡುವ ಜವಾಬ್ದಾರಿ ಕೇಂದ್ರ ಸರ್ಕಾರದ ಹೆಗಲೇರಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ಭೂಮಿ ಕಳೆದುಕೊಂಡವರಿಗೆ ನ್ಯಾಯ ಕೊಡಿಸಲು ಪರಿಹಾರ ಕಂಡುಕೊಳ್ಳಲಾಗಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಖುದ್ದು ಆಸಕ್ತಿ ವಹಿಸಿದ್ದಾರೆ. ಸುಪ್ರೀಂಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದು ಸರ್ಕಾರದ ಪರವಾಗಿ ಹಿರಿಯ ವಕೀಲ ದೇವದಾಸ ಕಾಮತ್ ಸುಪ್ರೀಂಕೋರ್ಟ್‌ನಲ್ಲಿ ವಾದ ಮಂಡನೆ ಮಾಡುವ ಸಾಧ್ಯತೆ ಇದೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಚಕ್ರಾ, ಸಾವೇಹಕ್ಲು, ಶರಾವತಿ ಮುಳುಗಡೆ ನಿರಾಶ್ರಿತರು ಸೇರಿ ಜಿಲ್ಲೆಯ ಹಲವು ಅರಣ್ಯ ಭೂಮಿ ವಿಷಯಗಳನ್ನು ಬಗೆಹರಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲಾಗಿದೆ. ಸದನದಲ್ಲಿ ಪ್ರತಿಪಕ್ಷಗಳು ಸರಿಯಾಗಿ ನಡೆದುಕೊಂಡಿಲ್ಲ. ಈಗ ರಾಜ್ಯ ಸರ್ಕಾರದ ವಿರುದ್ಧ ಪಾದಯಾತ್ರೆ ಮಾಡಲು ಪ್ರತಿಪಕ್ಷಗಳು ಹೊರಟಿವೆ. ಅದರಿಂದ ಅವರ ಬಂಡವಾಳವೇ ಬಯಲಾಗಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net