

ಮೈಸೂರು: ಇಸ್ರೇಲ್ ಯುದ್ಧದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕುರಿತು ಜಿಲ್ಲಾಡಳಿತಕ್ಕೆ ಅಧಿಕೃತ ಮಾಹಿತಿ ಯಾವುದೂ ಬಂದಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದರು.
ಇಸ್ರೇಲ್ ಯುದ್ಧಪೀಡಿತ ಪ್ರದೇಶದಲ್ಲಿ ನಂಜನಗೂಡಿನ ಕುಟುಂಬ ಸಿಲುಕಿದೆ ಎಂದು ಮಾಧ್ಯಮದಲ್ಲಿ ವರದಿ ಅಗಿದೆ. ಆದರೆ ಭಾರತೀಯ ರಾಯಭಾರಿ ಕಚೇರಿ ಅಥವಾ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬದವರು ಜಿಲ್ಲಾಡಳಿತವನ್ನು ಸಂಪರ್ಕಿಸಿಲ್ಲ ಎಂದು ಸ್ಪಷ್ಟಪಡಿಸಿದರು.
ಹಾಗೊಂದು ವೇಳೆ ಕುಟುಂಬ ಸಂಕಷ್ಟಕ್ಕೆ ಸಿಲುಕಿದ್ದರೆ ಕುಟುಂಬದವರು ನಮ್ಮನ್ನು ಸಂಪರ್ಕಿಸಿ ಮಾಹಿತಿ ನೀಡಬಹುದು. ಅಥವಾ ಯಾವುದೇ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ ಎನ್ನುವ ಮಾಹಿತಿ ಇದ್ದರೆ ಸಾರ್ವಜನಿಕರು ಸಹಾಯವಾಣಿ ಸಂಖ್ಯೆ 1128 ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಹೇಳಿದರು.