ಪಕ್ಷಕ್ಕಿಂತ ದೊಡ್ಡವರು ಯಾರೂ ಇಲ್ಲ

11-02-Shiva-1
ರಾಯಚೂರಿನ ರೈತ ಭವನದಲ್ಲಿ ಶನಿವಾರ ಸಂಜೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್‌ರನ್ನು ಸನ್ಮಾನಿಸಿ, ಗೌರವಿಸಲಾಯಿತು. ಮುಖಂಡರಾದ ಕೆ.ಶಾಂತಪ್ಪ, ಶಿವಪ್ಪ ನಾಯಕ, ರಾಜಶೇಖರ ರಂಗಾ, ಕೆ.ಪಂಪಾಪತಿ, ನಾಗೇಂದ್ರಪ್ಪ ಮಟಮಾರಿ, ಕೆ.ಅಸ್ಲಂ ಪಾಷಾ, ಬಸವರಾಜ, ರಾಮನಗೌಡ ಇದ್ದರು.
Published on

ರಾಯಚೂರು: ಪಕ್ಷಕ್ಕಿಂತ ಯಾರೂ ದೊಡ್ಡವರು ಇಲ್ಲ. ಪಕ್ಷ ಮೊದಲು ನಂತರ ನಾನು ಎನ್ನುವ ಮನೋಭಾವ ಎಲ್ಲರಲ್ಲಿ ಬರಬೇಕು. ಪಕ್ಷಕ್ಕಾಗಿ ದುಡಿದಾಗ ಮಾತ್ರ ಸ್ಥಾನಮಾನಗಳು ತಾನಾಗಿಯೇ ಹುಡುಕಿಕೊಂಡು ಬರುತ್ತವೆ ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಹೇಳಿದರು.
ಸ್ಥಳೀಯ ಎಪಿಎಂಸಿ ಆವರಣದಲ್ಲಿರುವ ರೈತ ಭವನದಲ್ಲಿ ಶನಿವಾರ ಸಂಜೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ನಾನು ಎರಡನೇ ಬಾರಿ ಶಾಸಕನಾಗಿ ಆಯ್ಕೆಯಾಗುವಲ್ಲಿ ಜನರ ಆಶೀರ್ವಾದದ ಜತೆಗೆ ಪಕ್ಷದ ಕೊಡುಗೆಯೂ ಪ್ರಮುಖವಾಗಿದೆ ಎಂದರು.
ಪಕ್ಷದ ನಾಯಕರು ನನ್ನ ಮೇಲೆ ಭರವಸೆಯಿಟ್ಟು ವಾಲ್ಕೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನವನ್ನು ನೀಡಿದ್ದು, ನಾಯಕರು ನನ್ನ ಮೇಲಿಟ್ಟಿರುವ ಭರವಸೆಯನ್ನು ಹುಸಿಗೊಳಿಸುವುದಿಲ್ಲ. ನಿಗಮದ ವತಿಯಿಂದ ದೊರೆಯುವ ಪ್ರತಿಯೊಂದು ಸೌಲಭ್ಯಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ದೊರೆಯುವಂತೆ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಮತ್ತು ಜಿಲ್ಲೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ನಾವೆಲ್ಲರೂ ಒಗ್ಗೂಡಿ ಕೆಲಸ ಮಾಡಬೇಕು. ಕೇಂದ್ರದಲ್ಲಿ ಪಕ್ಷವನ್ನು ಅಕಾರಕ್ಕೆ ತರಲು ಪಣತೊಡಬೇಕು ಎಂದು ಬಸನಗೌಡ ದದ್ದಲ್ ಹೇಳಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ವಸಂತಕುಮಾರ, ಮುಖಂಡರಾದ ಕೆ.ಶಾಂತಪ್ಪ, ಶಿವಪ್ಪ ನಾಯಕ, ರಾಜಶೇಖರ ರಂಗಾ, ಕೆ.ಪಂಪಾಪತಿ, ನಾಗೇಂದ್ರಪ್ಪ ಮಟಮಾರಿ, ಕೆ.ಅಸ್ಲಂ ಪಾಷಾ, ಬಸವರಾಜ, ರಾಮನಗೌಡ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net