ಮತದಾನ ಹಕ್ಕಿನಿಂದ ಯಾರೂ ದೂರ ಉಳಿಯಬಾರದು

02-11-Shiva-4
ರಾಯಚೂರಿನ ಜಿ.ಪಂ. ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಈಶಾನ್ಯ ಪದವೀಧರ ಮತ ಕ್ಷೇತ್ರದ ಮತದಾರರ ನೋಂದಣಿ ಅಭಿಯಾನದ ತರಬೇತಿ ಕಾರ್ಯಕ್ರಮದಲ್ಲಿ ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ ಮಾತನಾಡಿದರು. ಡಿಡಿಪಿಐ ಸೋಮಶೇಖರಪ್ಪ ಹೊಕ್ರಾಣಿ, ಡಿಡಿಪಿಐ ಸುರೇಶ ಹುಗ್ಗಿ, ಸ್ವೀಪ್ ಸಮಿತಿ ಸಂಘಟನಾಕಾರಿ ಡಾ.ಬಿ.ವೈ.ವಾಲ್ಮೀಕಿ ಇದ್ದರು.
Published on

ರಾಯಚೂರು: ದೇಶದಲ್ಲಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸೇರಿದಂತೆ ಅನೇಕ ವಲಯಗಳಲ್ಲಿ ವಿವಿಧತೆಯನ್ನು ಕಾಣಬಹುದಾಗಿದೆ. ಆದರೆ ಮತದಾನದಲ್ಲಿ ವಿಚಾರದಲ್ಲಿ ಪ್ರತಿಯೊಬ್ಬರಲ್ಲಿ ಏಕತೆಯನ್ನು ಕಾಣಬಹುದಾಗಿದೆ. ಮತದಾನ ಹಕ್ಕಿನಿಂದ ಯಾರೂ ದೂರ ಉಳಿಯಂತೆ ನೋಡಿಕೊಳ್ಳಬೇಕು ಎಂದು ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ ಹೇಳಿದರು.
ಸ್ಥಳೀಯ ಜಿ.ಪಂ. ಸಭಾಂಗಣದಲ್ಲಿ ಜಿಲ್ಲಾಡಳಿತದಿಂದ ಗುರುವಾರ ಹಮ್ಮಿಕೊಂಡಿದ್ದ ಈಶಾನ್ಯ ಪದವೀಧರ ಮತ ಕ್ಷೇತ್ರದ ಮತದಾರರ ನೋಂದಣಿ ಅಭಿಯಾನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಈಶಾನ್ಯ ಪದವೀಧರ ಮತಕ್ಷೇತ್ರದ ಮತದಾರರ ನೋಂದಣಿ ಯಶಸ್ವಿಯಾದರೆ ಮಾತ್ರ ಚುನಾವಣೆಯಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದರು.
ಈ ಚುನಾವಣೆಯಲ್ಲಿ ಮತದಾರರು ನೋಂದಣಿ ಮಾಡಿಸುವುದು ಕಡ್ಡಾಯವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ನೋಂದಣಿ ಮಾಡಿಸುವುದು ಹಾಗೂ ಮತದಾನದ ಕುರಿತು ಮಾಹಿತಿ ರವಾನಿಸಲು ಪ್ರತಿಯೊಬ್ಬರು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಮತದಾರರ ನೋಂದಣಿ ಅಭಿಯಾನದ ತರಬೇತುದಾರ ಸದಾಶಿವಪ್ಪ ಮಾತನಾಡಿ, ಅ.1ರಿಂದ ಮತದಾರರ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ನ.6 ನೋಂದಣಿಗೆ ಕೊನೆ ದಿನವಾಗಿದೆ ಎಂದು ತಿಳಿಸಿ, ನೋಂದಣಿ ಪ್ರಕ್ರಿಯೆಗೆ ಅನುಸರಿಸಬೇಕಾದ ನಿಯಮಗಳ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಪಿಯು ಡಿಡಿಪಿಐ ಸೋಮಶೇಖರಪ್ಪ ಹೊಕ್ರಾಣಿ, ಡಿಡಿಪಿಐ ಸುರೇಶ ಹುಗ್ಗಿ, ಸ್ವೀಪ್ ಸಮಿತಿ ಸಂಘಟನಾಕಾರಿ ಡಾ.ಬಿ.ವೈ.ವಾಲ್ಮೀಕಿ ಹಾಗೂ ವಿವಿಧ ಇಲಾಖೆ ಅಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net