ಸಾರ್ವಜನಿಕ ಗಣೇಶೋತ್ಸವ ಅವಕಾಶವಿಲ್ಲ

ganesha
Published on

ಉಡುಪಿ: ಕೋವಿಡ್‌ನಿಂದಾಗಿ ಜನರ ಆರೋಗ್ಯ ಸುರಕ್ಷತೆ ದೃಷ್ಟಿಯಿಂದ ಸಾರ್ವಜನಿಕ ಗಣೇಶೋತ್ಸವ ಆಚರಣೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಶನಿವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಕೋವಿಡ್-19ನಿಂದ ಜನರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ಗಣೇಶೋತ್ಸವ ಆಚರಿಸುವ ಬಗ್ಗೆ ಕೆಲವೊಂದು ಮಾರ್ಗಸೂಚಿ ಪ್ರಕಟಿಸಿವೆ.

ಸಾರ್ವಜನಿಕ ಗಣೇಶೋತ್ಸವ ಆಚರಣೆ, ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಇದರಲ್ಲಿ ಅವಕಾಶವಿಲ್ಲ. ಸಮಿತಿ, ಸಂಘಟನೆಗಳೂ ಆಚರಿಸುವಂತಿಲ್ಲ. ಮನೆಯಲ್ಲಷ್ಟೇ ಗಣೇಶೋತ್ಸವ ಆಚರಿಸಲು ಸರ್ಕಾರ ಸೂಚಿಸಿದೆ. ಜನರ ಆರೋಗ್ಯ ದೃಷ್ಟಿಯಿಂದ ಜಿಲ್ಲೆಯ ಎಲ್ಲ ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದನ್ನು ಪಾಲಿಸಿ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net