ಅಭಿವೃದ್ಧಿಯಲ್ಲಿ ರಾಜಕಾರಣ ಬೇಡ

3Athni1
Published on

ಅಥಣಿ: ಅಮ್ಮಾಜೇಶ್ವರಿ ಏತನೀರಾವರಿ ಯೋಜನೆ ಲಾಭ ಆ ಭಾಗದ ರೈತರಿಗೆ ಸಿಗಬೇಕು. ಅದರಲ್ಲಿ ಯಾವುದೇ ಲೋಪವಾಗಬಾರದು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಪಟ್ಟಣದ ಆರ್‌ಎಸ್‌ಪಿ ಉದ್ಯೋಗ ಸಮೂಹದ ಕಚೇರಿ ಮಂಗಳವಾರ ಉದ್ಘಾಟಿಸಿ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನಾನು ನೀರಾವರಿ ಮಂತ್ರಿಯಾಗಿದ್ದಾಗ ಮಂಜೂರಾತಿ ಪಡೆದಿದ್ದ ಅತ್ಯಂತ ಮಹತ್ವಾಕಾಂಕ್ಷಿಯ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆ ಈಗ ಆರಂಭವಾಗಿದೆ. ಇದರಲ್ಲಿ ರಾಜಕಾರಣ ಮಾಡಬಾರದು ಎಂದರು.

ಬೂತ್ ಮಟ್ಟದ ಕಾರ್ಯಕರ್ತರು, ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬಿಜೆಪಿಯನ್ನು ಬಲಿಷ್ಠವಾಗಿ ಸಂಘಟನೆ ಮಾಡಲಾಗುವುದು. 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರುವುದು ಖಚಿತ. ನಿರಂತರ ಜನರ ಸಂಪರ್ಕ ಮತ್ತು ಸಂಘಟನೆಗೆ ಆದ್ಯತೆ ನೀಡಲಾಗುವುದು. ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಮತ್ತೆ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವಂತೆ

ಹೈಕಮಾಂಡ್‌ಗೆ ಮನವಿ ಮಾಡಲಾಗುವುದು. ಮುಂದಿನ ಚುನಾವಣೆ ಎದುರಿಸಬೇಕಾದ ನಿಟ್ಟಿನಲ್ಲಿ ಯಾರಿಗೂ ನೋವಾಗದಂತೆ ಮಾತನಾಡಲು ಯತ್ನಾಳರಿಗೂ ತಿಳಿಹೇಳಲಾಗಿದೆ ಎಂದರು.

ಮಾಜಿ ಸಚಿವ ಶ್ರೀಮಂತ ಪಾಟೀಲ, ಮಾಜಿ ಶಾಸಕ ಮಹೇಶ ಕುಮಠಳ್ಳಿ, ಆರ್‌ಎಸ್‌ಪಿ ಸಂಸ್ಥಾಪಕ ಅಧ್ಯಕ್ಷ ರವಿ ಪೂಜಾರಿ, ಧರೆಪ್ಪ ಠಕ್ಕಣವರ, ಸತ್ಯಪ್ಪ ಬಾಗೆನ್ನವರ, ರಾಜು ಐಹೊಳೆ, ಶಿವು ಸಿಂಧೂರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net