ಜೂ.16ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

Published on

ಹಾವೇರಿ: ಬಸವನಕಟ್ಟಿ 110 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜೂ.16ರಂದು ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಅಂದು ಬಸವನಕಟ್ಟಿ 110 ಕೆ.ವಿ.ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರ್‌ಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಆದ್ದರಿಂದ ಈ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಗೆ ಬರುವ ಬಸವನಕಟ್ಟಿ, ಸೋಮನಕಟ್ಟಿ, ಮಾಚಾಪುರ, ಬೂದಗಟ್ಟಿ, ಕನವಳ್ಳಿ, ಹನುಮನಹಳ್ಳಿ, ಕಾಟೇನಹಳ್ಳಿ, ಅಗಡಿ, ತಿಮ್ಮೇನಹಳ್ಳಿ, ಮಾಳಾಪುರ, ಗಾಂಧಿಪುರ, ಜಾನಕೊಪ್ಪ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಶಿಗ್ಗಾಂವಿಯ ಹಲವೆಡೆ ಕರೆಂಟ್ ಇರಲ್ಲ
ಶಿಗ್ಗಾಂವಿ ತಾಲೂಕಿನ ರಾಮನಕೊಪ್ಪ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜೂ.16ರಂದು ನಿರ್ವಹಣಾ ಕಾಮಗಾರಿ ನಡೆಯುವ ಕಾರಣ ಮುತ್ತಳ್ಳಿ, ಕಮಲಾನಗರ, ತಡಸ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net