ಪೌರತ್ವ ತಿದ್ದುಪಡಿ ಕಾಯ್ದೆಯಿಂದ ತೊಂದರೆ ಇಲ್ಲ

03arsph1ep (1)
Published on

ಅರಸೀಕೆರೆ: ಕೇಂದ್ರ ಸರ್ಕಾರದ ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಯಾವುದೇ ತೊಂದರೆ ಎದುರಾಗುವುದಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನವಿಲೆ ಅಣ್ಣಪ್ಪ ಸ್ಪಷ್ಟಪಡಿಸಿದರು.

ನಗರದ ಪರಮೇಶ್ವರಪ್ಪ ಸಮುದಾಯ ಭವನದಲ್ಲಿ ಪಕ್ಷದಿಂದ ಶುಕ್ರವಾರ ಆಯೋಜಿಸಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಜನಜಾಗೃತಿ ಅಭಿಯಾನ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಎನ್‌ಡಿಎ ಮೈತ್ರಿಕೂಟ ಚುನಾವಣಾ ಪೂರ್ವದಲ್ಲಿ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಸಿಎಎ ಹಾಗೂ ಎನ್‌ಆರ್‌ಸಿ ಜಾರಿಗೊಳಿಸಲು ನಿರ್ಧರಿಸಿದೆ. ಇದರಿಂದ ಯಾವುದೇ ಸಮುದಾಯಕ್ಕೂ ತೊಂದರೆ ಎದುರಾಗುವುದಿಲ್ಲ. ಆದರೆ ವಾಸ್ತವ ಮರೆಮಾಚುತ್ತಿರುವ ಪ್ರತಿ ಪಕ್ಷಗಳು ಜನರಲ್ಲಿ ಗೊಂದಲ ಮೂಡಿಸುವ ಮೂಲಕ ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ. ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಮನೆ ಮನೆಗೆ ತೆರಳಿ ಮಾಹಿತಿ ಪತ್ರ ನೀಡುವ ಮೂಲಕ ವಾಸ್ತವ ಚಿತ್ರಣ ತೆರದಿಡುವ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಮಾಜಿ ಶಾಸಕ ಎ.ಎಸ್.ಬಸವರಾಜು, ಜಿಲ್ಲಾ ವಕ್ತಾರ ಎನ್.ಡಿ.ಪ್ರಸಾದ್, ಗ್ರಾಮಾಂತರ ಮಂಡಲದ ಅಧ್ಯಕ್ಷ ಜಿವಿಟಿ ಬಸವರಾಜು ಮಾತನಾಡಿ ಅಭಿಯಾನದ ರೂಪರೇಷೆ ಕುರಿತು ವಿವರಿಸಿದರು. ವಿವಿಧ ಮಂಡಲ, ಮೋರ್ಚಾ ಹಾಗೂ ಹೋಬಳಿ ಶಕ್ತಿ ಕೇಂದ್ರದ ಪದಾಧಿಕಾರಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net