ಪ್ರಾಧಿಕಾರ ಸಭೆ ನಡೆಸಲು ತಾಂತ್ರಿಕ ಸಮಸ್ಯೆ ಇಲ್ಲ: ಸಚಿವ ಎಚ್.ಕೆ.ಪಾಟೀಲ್

mysore
Published on

ಮೈಸೂರು: ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸಭೆ ನಡೆಸಲು ಯಾವುದೇ ತಾಂತ್ರಿಕ ಸಮಸ್ಯೆ ಇಲ್ಲ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದರು.


ಚಾಮುಂಡಿಬೆಟ್ಟದಲ್ಲಿ ಮಂಗಳವಾರ ನಡೆದ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಾಧಿಕಾರ ರಚನೆ ಕುರಿತು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಏಕೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೋ ಗೊತ್ತಿಲ್ಲ. ಆದರೆ, ಈ ಪ್ರಾಧಿಕಾರದಿಂದ ಚಾಮುಂಡಿ ಬೆಟ್ಟದ ಅಭಿವೃದ್ಧಿಗೆ ಚಾಲನೆ ನೀಡಲಾಗುತ್ತಿದೆ ಎಂದರು.


ಸಿಎಂ ಬದಲಾವಣೆ ವಿಚಾರವೇ ಅಪ್ರಸ್ತುತ. ಆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಪ್ರಶ್ನೆವೊಂದಕ್ಕೆ ಉತ್ತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net